Advertisement

ಸರ್ಕಾರಿ ಶಾಲೆಗಳ ಕೊಠಡಿ ದುರಸ್ತಿಗೆ ಕ್ರಮ: ತನ್ವೀರ್‌

03:45 AM Feb 09, 2017 | Team Udayavani |

ವಿಧಾನಪರಿಷತ್ತು: ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆಗಳ ಕೊಠಡಿಗಳ ದುರಸ್ಥಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಸೇಠ್ ತಿಳಿಸಿದ್ದಾರೆ.

Advertisement

ಕಾಂಗ್ರೆಸ್‌ ನ ಮೋಟಮ್ಮ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ರಾಜ್ಯದಲ್ಲಿ ಸರ್ಕಾರಿ ಶಾಲೆಗಳ 66 ಸಾವಿರ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಅವುಗಳ ದುರಸ್ತಿಗೆ ಕೇಂದ್ರದ ನೆರವು ಕೋರುವುದರ ಜತೆಗೆ ಈ ಬಾರಿಯ ಬಜೆಟ್‌ನಲ್ಲೂ ಹೆಚ್ಚಿನ ಹಣ ನೀಡುವಂತೆ ಮುಖ್ಯಮಂತ್ರಿಯವರಿಗೆ ಪ್ರಸ್ತಾಪವೆ ಸಲ್ಲಿಸಲಾಗುವುದು ಎಂದು ಹೇಳಿದರು.

ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ದುರಸ್ಥಿಗೆ ಕ್ರಿಯಾ ಯೋಜನೆ ರೂಪಿಸಲಾಗಿದ್ದು  ಈ ಬಾರಿ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತನ್ವೀರ್‌ ಸೇಠ್ ಹೇಳಿದರು.

ರಾಷ್ಟ್ರೀಯ ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ ಶಾಲಾ ಕಟ್ಟಡಗಳ ನಿರ್ಮಾಣ ಹಾಗೂ ದುರಸ್ತಿಗೆ ಹಿಂದಿನ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ಅನುದಾನ ಬಂದಿಲ್ಲ. ಈ ವರ್ಷ 1,879 ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲಾಗಿತ್ತು. ಇದರಲ್ಲಿ ಕೇಂದ್ರ ಸರ್ಕಾರದ ಪಾಲು 1,127 ಕೋಟಿ ರೂ. ಬರಬೇಕಾಗಿತ್ತು. ಆದರೆ, ಬಂದಿದ್ದು ಕೇವಲ 544 ಕೋಟಿ ರೂ. ಮಾತ್ರ ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next