Advertisement
ದಿನಪೂರ್ತಿ ಶೈಕ್ಷಣಿಕ ಚಟುವಟಿಕೆಯ ಜತೆ ಜತೆಗೆ ಕ್ರೀಡೆ, ಚರ್ಚೆ, ರಸ ಪ್ರಶ್ನೆ, ಸಂವಾದ ಹೀಗೆ ವಿನೂನತ ಕಾರ್ಯಕ್ರಮಗಳು ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಮೊದಲ ದಿನ ನಡೆಯಲಿದೆ.
ಸರ್ಕಾರಿ ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಹತ್ತಾರು ಕಾರ್ಯಕ್ರಮಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಳ್ಳಲಾಗಿತ್ತು. ತಿಂಗಳುಪೂರ್ತಿ ದಾಖಲಾತಿ ಆಂದೋಲನ ನಡೆಸಿ, ತಮ್ಮ ಶಾಲಾ ವ್ಯಾಪ್ತಿಯ ಮಕ್ಕಳನ್ನು ಸರ್ಕಾರಿ ಶಾಲೆಗೆ ಕರೆತರುವ ನಿಟ್ಟಿನಲ್ಲಿ ಮುಖ್ಯಶಿಕ್ಷಕರು ಮತ್ತು ಸಹ ಶಿಕ್ಷಕರು ಅಗತ್ಯ ಕ್ರಮ ತೆಗೆದುಕೊಂಡಿದ್ದಾರೆ. ಶಾಲಾರಂಭದ ನಂತರವೂ ದಾಖಲಾತಿ ಪ್ರಕ್ರಿಯೆ ಮುಂದುವರಿಯುತ್ತದೆ.
Related Articles
ರಾಜ್ಯ ಬಿಜೆಪಿ ಸೋಮವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ಆದರೆ, ಸರ್ಕಾರಿ ಶಾಲಾ ಕಾಲೇಜಿಗೆ ಯಾವುದೇ ರೀತಿಯ ರಜೆ ಘೋಷಣೆ ಮಾಡಿಲ್ಲ. ಆಯಾ ಜಿಲ್ಲಾಡಳಿತಕ್ಕೆ ಪರಿಸ್ಥಿತಿ ಆಧರಿಸಿ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಇರುವುದರಿಂದ ಶಾಲೆಗಳಿಗೆ ರಜೆ ನೀಡುವ ವಿಚಾರವನ್ನು ಜಿಲ್ಲಾಡಳಿತಕ್ಕೆ ಬಿಟ್ಟಿದ್ದೇವೆ. ಇಲಾಖೆಯ ಕೇಂದ್ರ ಕಚೇರಿಯಿಂದ ಈ ಸಂಬಂಧ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಉದಯವಾಣಿಗೆ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ರಾಜ್ಯಪಠ್ಯಕ್ರಮದ ಎಲ್ಲ ಶಾಲೆಗಳು ಆರಂಭವಾಗಲಿದೆ.
Advertisement
ಯಾವುದೇ ಮುನ್ನೆಚ್ಚರಿಕೆ ಕ್ರಮ ಇಲ್ಲದೆ ಬಂದ್‌ಗೆ ಕರೆ ನೀಡಲಾಗಿದೆ. ಶೈಕ್ಷಣಿಕ ತರಗತಿ ಆರಂಭವಾಗುವ ಮೊದಲ ದಿನವೇ ರಜಾ ಘೋಷಣೆ ಮಾಡುವುದು ಸರಿಯಲ್ಲ. ಹೀಗಾಗಿ ಖಾಸಗಿ ಶಾಲಾಡಳಿತ ಮಂಡಳಿ ಬಂದ್‌ಗೆ ಬೆಂಬಲ ನೀಡುವುದಿಲ್ಲ. ಶಾಲಾರಂಭದ ಪ್ರಕ್ರಿಯೆಯಲ್ಲಿ ಎರಡು ಭಾಗವಹಿಸಲಿದ್ದಾರೆ ಎಂದು ರಾಜ್ಯ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾಡಳಿತ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ತಿಳಿಸಿದ್ದಾರೆ.