Advertisement

ಸರ್ಕಾರ ಭದ್ರವಾಗಿದೆ:ಇನ್ನಾದರೂ ಕೆಲಸ ಮಾಡಿ ಹಿರಿಯ ಅಧಿಕಾರಿಗಳಿಗೆ ಸಿಎಂ ತಾಕೀತು

09:58 AM Dec 14, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಎದುರಾಗಿದ್ದರಿಂದ ಸರ್ಕಾರದ ಭವಿಷ್ಯದ ಬಗ್ಗೆ ಅಧಿಕಾರಿಗಳಲ್ಲಿ ಗೊಂದಲ ಇತ್ತು. ಈಗ ಸರ್ಕಾರ ಸುಭದ್ರವಾಗಿದೆ. ಇನ್ನಾದರೂ ಸಕ್ರೀಯವಾಗಿ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸರ್ಕಾರದ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

Advertisement

ಉಪ ಚುನಾವಣೆಯಲ್ಲಿ ಯಶಸ್ಸು ಗಳಿಸಿದ ನಂತರ ಆಡಳಿತಕ್ಕೆ ಚುರುಕು ಮುಟ್ಟಿಸಲು ಮೊದಲ ಬಾರಿಗೆ ಎಲ್ಲ ಇಲಾಖೆಗಳ ಅಪರ್‌ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ, ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಉಪ ಚುನಾವಣೆ ಹಾಗೂ ಬೇರೆ ಕಾರ್ಯಗಳಿಂದ ಸರ್ಕಾರದ ಸ್ಥಿತಿಯ ಬಗ್ಗೆ ಗೊಂದಲ ಎಲ್ಲರಲ್ಲೂ ಇತ್ತು. ಅಧಿಕಾರಿಗಳಿಗೂ ಇತ್ತು. ಆದರೆ, ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಪಡೆದಿದ್ದು, ಸರ್ಕಾರ ಸುಭದ್ರವಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ಸರ್ಕಾರದ ಕಾರ್ಯದ ಬಗ್ಗೆ ಸಾರ್ವಜನಿಕರಲ್ಲಿ ಉತ್ತಮ ಅಭಿಪ್ರಾಯವಿಲ್ಲ. ಅಧಿಕಾರಿಗಳು ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪ ಇದೆ. ಇನ್ನಾದರೂ ಒಳ್ಳೆಯ ಕೆಲಸ ಮಾಡಿ, ಕಾರ್ಯದರ್ಶಿಗಳು ಪ್ರತಿ ತಿಂಗಳು ಪ್ರಗತಿ ಪರಿಶೀಲನಾ ವರದಿ ಮಾಡಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ರಾಜ್ಯದ 110 ವರ್ಷದ ಇತಿಹಾಸದಲ್ಲಿ ಅತಿ ಹೆಚ್ಚು ಪ್ರವಾಹಕ್ಕೆ ಸಿಲುಕಿ ಸುಮಾರು 8 ಲಕ್ಷ ಎಕರೆ ಜಮೀನು ಬೆಳೆ ನಾಶವಾಗಿ, 2.5 ಲಕ್ಷ ಮನೆಗಳು ಹಾಳಾಗುವೆ. ಪ್ರವಾಹದಸಂದರ್ಭದಲ್ಲಿ ಜಿಲ್ಲಾಡಳಿತಗಳು ಉತ್ತಮ ಕೆಲಸ ಮಾಡಿವೆ ಅವರಿಗೆ ಅಭಿನಂದನೆ. ಬೆಳಗಾವಿ ಬಾಗಲಕೋಟೆ ಜಿಲ್ಲೆಗಳಲ್ಲಿ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ರಾಜ್ಯದ ಇತಿಹಾಸದಲ್ಲಿಯೇ ಮನೆ ಕಳೆದುಕೊಂಡವರಿಗೆ 5 ಲಕ್ಷ ಬೆಳೆ ನಾಶಕ್ಕೆ ಕೇಂದ್ರ ಸರ್ಕಾರ ನೀಡುವ ಹಣಕ್ಕಿಂತ 10 ಸಾವಿರ ಹೆಚ್ಚು ಹಣ ನೀಡಿದ್ದೇವೆ. ರಸ್ತೆ ಹಾಗೂ ಮೂಲ ಸೌಕರ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. 5 ಲಕ್ಷ ಪರಿಹಾರ ಎಲ್ಲಿ ಹೋಯಿತು. ನಾವು ಎಲ್ಲ ಸರಿ ಮಾಡಿದ್ದೇವೆ ಎಂದರೂ ಜನರಿಗೆ ಸರಿಯಾಗಿ ತಲುಪಿಲ್ಲ ಎಂದು ವರದಿ ಬರುತ್ತಿದ್ದು, ಜಿಲ್ಲಾ ಉಸ್ತುವವಾರಿ ಕಾರ್ಯದರ್ಶಿಗಳು ಪ್ರತಿ ತಿಂಗಳಲ್ಲಿ ಎರಡು ಬಾರಿ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿ ವಾಸ್ತವ ವರದಿ ನೀಡಬೇಕು. ಮುಖ್ಯಕಾರ್ಯದರ್ಶಿ ಪ್ರತಿ ತಿಂಗಳು ಒಂದು ಜಿಲ್ಲೆಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿ, ವರದಿ ನೀಡುವಂತೆ ಸೂಚಿಸಿದರು.

ವಾರದೊಳಗೆ ಪರಿಹಾರ ನೀಡದಿದ್ದರೆ ಕ್ರಮ:
ರಾಜ್ಯದಲ್ಲಿ ಪ್ರವಾಹ ಉಂಟಾಗಿ ಮೂರು ತಿಂಗಳು ಕಳೆದಿದೆ ಆದರೂ ಇನ್ನೂ ಸಂತ್ರಸ್ತರಿಗೆ ಪರಿಹಾರ ದೊರೆತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ತಾಲೂಕು ಮಟ್ಟದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಆರೋಪವಿದೆ. ನಾವು ಆಡಳಿತದಲ್ಲಿ ಬಿಗಿ ತರಬೇಕಾಗಿದೆ. ಪ್ರವಾಹ ಪೀಡಿತ ಸಂತ್ರಸ್ತರಿಗೆ ಪರಿಹಾರ ವಿಳಂಬಕ್ಕೆ ವಿವಿಧ ಕಾರಣ ನೀಡುತ್ತಿದ್ದ ಅಧಿಕಾರಿಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ. 4 ತಿಂಗಳು ನೀವು ಮಾಡಿದ ಕೆಲಸವಾದರು ಏನು ಎಂದು ಪ್ರಶ್ನೆ ಮಾಡಿದ ಮುಖ್ಯಮಂತ್ರಿಗಳು ಇನ್ನು ಒಂದು ವಾರದ ಒಳಗೆ ಪರಿಹಾರ ವಿತರಿಸಿ ಪ್ರಗತಿ ವರದಿ ನೀಡಬೇಕು ಇಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮನೆ ಕಳೆದುಕೊಂಡವರಿಗೆ ಆರಂಭಿಕವಾಗಿ ಒಂದು ಲಕ್ಷ ರೂ.ಗಳನ್ನು ನೀಡಿದ್ದರೂ,ಅವರು ಮನೆ ಕಟ್ಟಿಕೊಳ್ಳಲು ಮುಂದೆ ಬರುತ್ತಿಲ್ಲ ಎಂದು ತಿಳಿದು ಬಂದಿದೆ. ಸಂತ್ರಸ್ತರು ಏಕೆ ಹಿಂಜರಿಯುತ್ತಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಿ ಅವರ ಸಮಸ್ಯೆಗಳನ್ನು ಪಟ್ಟಿ ಮಾಡಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.ಅಲ್ಲದೇ ಆಧಾರ್‌ ಕಾರ್ಡ್‌ ಇಲ್ಲದವರಿಗೆ ಚೆಕ್‌ ಮೂಲಕ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next