Advertisement

ಸರಕಾರಿ ಸೇವೆ ಜನರ ಮನೆ ಬಾಗಿಲಿಗೆ

02:16 PM Apr 17, 2022 | Team Udayavani |

ರಾಮದುರ್ಗ: ದಲ್ಲಾಳಿಗಳ ಹಾವಳಿ ತಪ್ಪಿಸಿ ಸರಕಾರದ ಯೋಜನೆ ಸರ್ವರಿಗೂ ತಲುಪಿಸುವ ಉದ್ದೇಶದಿಂದ ಗ್ರಾಮ ವಾಸ್ತವ್ಯದ ಮೂಲಕ ಜನರ ಸಮಸ್ಯೆ ಆಲಿಸಿ ಅವುಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಾಗುತ್ತಿದೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

Advertisement

ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಜರುಗಿದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಜನತೆ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆ ಅನುಷ್ಠಾನಕ್ಕೆ ತಂದು ಅವುಗಳನ್ನು ನೇರವಾಗಿ ಜನರಿಗೆ ತಲುಪುವಂತೆ ಮಾಡುತ್ತಿವೆ ಎಂದು ಹೇಳಿದರು.

ಗ್ರಾಮೀಣ ಜನತೆಗೆ ಕುಡಿಯುವ ನೀರು ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಜಲಜೀವನ್‌ ಮಿಷನ್‌ ಯೋಜನೆ ಮೂಲಕ ಮನೆ ಮನೆಗೆ ನಳಗಳ ಜೋಡಣೆ ಮಾಡುವ ಮೂಲಕ 150 ಕೋಟಿ ಅನುದಾನದಲ್ಲಿ 137 ಹಳ್ಳಿಗಳಿಗೆ ಕಾಮಗಾರಿ ಕೈಗೊಳ್ಳಲಾಗಿದೆ. ಅಲ್ಲದೇ 340 ಕೋಟಿ ಅನುದಾನದಲ್ಲಿ ಮುನವಳ್ಳಿ ಡ್ಯಾಂನಿಂದ ಪ್ರತ್ಯೇಕ ಕುಡಿಯುವ ನೀರು ತರಲು ಯೋಜನೆಗೆ ಸರಕಾರ ಅನುಮೋದನೆ ನೀಡಿದ್ದು, ಸದ್ಯದಲ್ಲಿಯೇ ಟೆಂಡರ್‌ ಕರೆಯಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ| ಎಂ.ಜಿ. ಹಿರೇಮಠ ಮಾತನಾಡಿ, ಗ್ರಾಮ ವಾಸ್ತವ್ಯದ ಮೂಲಕ ಜನರ ಯಾವ ಸಮಸ್ಯೆಗಳಿದ್ದರೂ ಅವುಗಳನ್ನು ಸ್ವೀಕರಿಸಿ ಪರಿಹರಿಸಲಾಗುವುದು. ಅಲ್ಲದೆ ಈ ಕಾರ್ಯಕ್ರಮದ ಮೂಲಕ ಗ್ರಾಮದ ಎಸ್‌ಸಿ ಹಾಗೂ ಎಸ್‌ಟಿ ಕಾಲೋನಿಗಳ ಭೇಟಿ, ಅಂಗನವಾಡಿ ಕೇಂದ್ರಗಳ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಲಾಗುವುದು ಎಂದು ಹೇಳಿದರು.

Advertisement

ಗ್ರಾಪಂ ಅಧ್ಯಕ್ಷೆ ನಿರ್ಮಲಾ ಖಾನಪೇಠ ಅಧ್ಯಕ್ಷತೆ ವಹಿಸಿದ್ದರು. ಗ್ರಾಮದ ಮುಖಂಡ ಮಲ್ಲಿಕಾರ್ಜುನ ಕೊಪ್ಪದ, ಅಪರ ಜಿಲ್ಲಾಧಿಕಾರಿ ಅಶೋಕ ದುರಗುಂಟಿ, ಜಂಟಿ ಕೃಷಿ ನಿರ್ದೇಶಕ ಎಸ್‌.ಎಸ್‌. ಪಾಟೀಲ, ಡಿಎಚ್‌ಒ ಎಸ್‌.ವಿ. ಮುನ್ಯಾಳ, ತಾಪಂ ಇಒ ಪ್ರವೀಣ ಸಾಲಿ, ಸರಕಾರಿ ನೌಕರ ಸಂಘದ ತಾಲೂಕಾಧ್ಯಕ್ಷ ರಮೇಶ ಅರಕೇರಿ, ಹೆಸ್ಕಾ ಎಇಇ ಕಿರಣ ಸಣ್ಣಕ್ಕಿ ಸೇರಿದಂತೆ ತಾಲೂಕು ಮಟ್ಟದ ಇತರ ಅಧಿಕಾರಿಗಳು ಇದ್ದರು.

ತಹಶೀಲ್ದಾರ್‌ ಮಲ್ಲಿಕಾರ್ಜುನ ಹೆಗ್ಗನ್ನವರ ಸ್ವಾಗತಿಸಿದರು. ಜಿ.ಎಂ. ಹುಲ್ಲೂರ ನಿರೂಪಿಸಿ, ವಂದಿಸಿದರು.

ಅದ್ಧೂರಿ ಮೆರವಣಿಗೆ: ಸಾಲಹಳ್ಳಿ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ| ಎಂ.ಜಿ. ಹಿರೇಮಠ ಹಾಗೂ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿ, ತೆರೆದ ವಾಹನದ ಮೂಲಕ ಆನೆಯ ಮೆರವಣಿಗೆಯೊಂದಿಗೆ ಮಹಿಳೆಯರ ಕುಂಭ ಹಾಗೂ ವಿವಿಧ ವಾದ್ಯ ಮೇಳಗಳೊಂದಿಗೆ ಅದ್ಧೂರಿಯಾಗಿ ವೇದಿಕೆಗೆ ಗ್ರಾಮಸ್ಥರು ಕರೆತರುವಲ್ಲಿ ಮುಂದಾದರು.

Advertisement

Udayavani is now on Telegram. Click here to join our channel and stay updated with the latest news.

Next