ಹೊಸದಿಲ್ಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದನ್ನು ವಿರೋಧಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ತನ್ನ ಅಫಿಡವಿಟ್ ನಲ್ಲಿ, ಸಲಿಂಗ ಸಂಬಂಧಗಳು ಮತ್ತು ಭಿನ್ನಲಿಂಗೀಯ ಸಂಬಂಧಗಳು ಸ್ಪಷ್ಟವಾಗಿ ವಿಭಿನ್ನ ವರ್ಗಗಳಾಗಿದ್ದು, ಅವುಗಳನ್ನು ಒಂದೇ ರೀತಿಯಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಸಲಿಂಗ ವ್ಯಕ್ತಿಗಳು ಪಾಲುದಾರರಾಗಿ ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿತು. ಇದನ್ನು ಗಂಡ, ಹೆಂಡತಿ ಮತ್ತು ಮಕ್ಕಳ ಭಾರತೀಯ ಕುಟುಂಬ ಘಟಕದ ಪರಿಕಲ್ಪನೆಯೊಂದಿಗೆ ಹೋಲಿಸಲಾಗುವುದಿಲ್ಲ ಎಂದಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಕೇಂದ್ರದ ಅಫಿಡವಿಟ್ ಬಂದಿದೆ.
ಇದನ್ನೂ ಓದಿ:ಕಾರ್ಯಕ್ರಮಕ್ಕೆ ಆಹ್ವಾನಿಸದ್ದಕ್ಕೆ ಪ್ರಧಾನಿಗೆ ಹೃತ್ಪೂರ್ವಕ ಧನ್ಯವಾದ: ಡಿ.ಕೆ.ಸುರೇಶ್
ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆ ನಡೆಸಲಿದೆ. ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠದ ಮುಂದೆ ವಿಚಾರಣೆಗೆ ಬರಲಿದೆ.
ದೆಹಲಿ ಹೈಕೋರ್ಟ್ ಸೇರಿದಂತೆ ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಉಳಿದಿರುವ ಎಲ್ಲಾ ಅರ್ಜಿಗಳನ್ನು ಜನವರಿ 6 ರಂದು ಸುಪ್ರೀಂ ಕೋರ್ಟ್ ಕ್ಲಬ್ ಮಾಡಿ ತನಗೆ ವರ್ಗಾಯಿಸಿದೆ.