Advertisement

ಉಗ್ರರ ಬಗ್ಗೆ ಸರಕಾರ ಸಹಾನುಭೂತಿ: ಆರ್‌. ಅಶೋಕ್‌

09:45 PM Mar 03, 2024 | Team Udayavani |

ಬೆಂಗಳೂರು: ಸಮಾಜಘಾತಕ ಶಕ್ತಿಗಳು ಹಾಗೂ ಉಗ್ರಗಾಮಿ ಸಂಘಟನೆಗಳು ನಡೆಸುತ್ತಿರುವ ದುಷ್ಕೃತ್ಯಗಳ ಬಗ್ಗೆ ರಾಜ್ಯದ ಕಾಂಗ್ರೆಸ್‌ ಸರಕಾರ ಸಹಾನುಭೂತಿ ಮನೋಭಾವ ಪ್ರದರ್ಶಿಸುತ್ತಿರುವುದು ಆಘಾತಕಾರಿ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು, ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶದ್ರೋಹ ಕೆಲಸ ಮಾಡುತ್ತಿರುವ ರಾಜ್ಯ ಸರಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗಿದೆ. ಜನವಿರೋಧಿ ಧೋರಣೆಯ ಈ ಸರಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸುವುದಕ್ಕೆ ಪೂರ್ವಭಾವಿಯಾಗಿ ಜನತೆಯಿಂದ ಅಭಿಪ್ರಾಯ ಸಂಗ್ರಹಿಸುವ ಸಂಕಲ್ಪ ಅಭಿಯಾನ ಕಾರ್ಯಕ್ರಮಕ್ಕೆ ಪಕ್ಷದ ಕಚೇರಿಯಲ್ಲಿ ರವಿವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರಿಗೆ ಅವರು ಪ್ರತಿಕ್ರಿಯೆ ನೀಡಿದರು.
ವಿಧಾನಸೌಧದಲ್ಲಿ ಪಾಕಿಸ್ಥಾನ ಪರ ಘೋಷಣೆ ಕೂಗಿದ ಮತ್ತು ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಗಳಲ್ಲಿ ಸರಕಾರ ನಡೆದುಕೊಳ್ಳುತ್ತಿರುವ ರೀತಿ ಕಳವಳಕಾರಿಯಾಗಿದೆ. ದೇಶ ವಿದ್ರೋಹಿ ಶಕ್ತಿಗಳನ್ನೇ ಸಮರ್ಥನೆ ಮಾಡುವ, ದುಷ್ಕೃತ್ಯಗಳನ್ನು ಮುಚ್ಚಿ ಹಾಕುವ ಷಡ್ಯಂತ್ರ ನಡೆಸಲಾಗಿದೆ ಎಂದು ಕಿಡಿಕಾರಿದರು.

ಎಫ್‌ಎಸ್‌ಎಲ್‌ ವರದಿ ಬಹಿರಂಗಪಡಿಸಿ
ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಿದ ಆರೋಪಿಗಳನ್ನು ಆರು ದಿನ ಕಳೆದರೂ ಬಂಧಿಸಿಲ್ಲ. ಈಗಾಗಲೇ ಎಫ್‌ಎಸ್‌ಎಲ್‌ನವರು ಪೊಲೀಸರು ನೀಡಿದ್ದ ವೀಡಿಯೋ ತುಣುಕಿನಲ್ಲಿ ಪಾಕ್‌ ಪರ ಘೋಷಣೆ ಕೂಗಿರುವುದು ಸತ್ಯ ಎಂದು ವರದಿ ನೀಡಿದ್ದಾರೆ. ಇದನ್ನು ಕೆಲವು ಅಧಿಕಾರಿಗಳು ನನಗೂ ಹೇಳಿದ್ದಾರೆ ಮತ್ತು ಮಾಧ್ಯಮಗಳು ಅದನ್ನು ವರದಿ ಮಾಡಿವೆ. ಆದರೂ ಇನ್ನೂ ವರದಿ ಕೈ ಸೇರಿಲ್ಲ ಎಂದು ಸತ್ಯವನ್ನು ಮರೆ ಮಾಚುವ ಕೆಲಸ ಮಾಡಲಾಗುತ್ತಿದೆ ಎಂದು ತರಾಟೆ ತೆಗೆದುಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next