Advertisement

ಏಳನೇ ತರಗತಿ ಪಬ್ಲಿಕ್ ಪರೀಕ್ಷೆ ಇಂದು ಅಂತಿಮ ತೀರ್ಮಾನ; ಸಚಿವ ಸುರೇಶ್ ಕುಮಾರ್

09:46 AM Dec 19, 2019 | Nagendra Trasi |

ಬೆಂಗಳೂರು: ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ  ಕುರಿತು ಇರುವ ಗೊಂದಲ ಮಾತ್ರ ಇನ್ನೂ ಬಗೆಹರಿದಿಲ್ಲ.

Advertisement

ಈ ನಿಟ್ಟಿನಲ್ಲಿ ಬುಧವಾರ ಬಹುತೇಕ ಸಮಸ್ಯೆಗೆ ತರೆಬೀಳಲಿದ್ದು, ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸುವ ವಿಚಾರವಾಗಿ ಸರಕಾರ ಮತ್ತು ಮಕ್ಕಳ ಹಕ್ಕುಗಳ ಆಯೋಗದ ನಡುವೆ ಮಾತುಕತೆ ನಡೆಯಲಿದೆ. ಈ ಸಭೆಯಲ್ಲಿ  ಪರೀಕ್ಷೆ ನಡೆಸಬೇಕೇ, ಬೇಡವೇ ಎಂಬ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌, ಪರೀಕ್ಷೆ ವ್ಯವಸ್ಥೆ ಬಗ್ಗೆಯೇ ತಿಳಿವಳಿಕೆ ಇಲ್ಲದೇ ಎಸ್‌ಎಸ್‌ಎಲ್ ಸಿಯಲ್ಲಿ  ಮಕ್ಕಳಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಏಳನೇ ತರಗತಿಯಲ್ಲಿ ಪಬ್ಲಿಕ್‌ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಆದರೆ ಈ ಪ್ರಸ್ತಾವನೆಗೆ ಮಕ್ಕಳ ಹಕ್ಕು ಆಯೋಗ ಆಕ್ಷೇಪ ವ್ಯಕ್ತ ಪಡಿಸಿದೆ. ಈ ಸಂಬಂಧ ಇಂದು ಹಿರಿಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರೊಂದಿಗೆ ಸಭೆ ನಡೆಸಿ, ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಾಯೋಗಿಕವಾಗಿ ಪಬ್ಲಿಕ್‌ ಪರೀಕ್ಷೆ ಜಾರಿ ಮಾಡಿ, ಯಾವ ವಿದ್ಯಾರ್ಥಿಯನ್ನೂ ಫೇಲ್‌ ಮಾಡದಿರಲು ನಿರ್ಧರಿಸಲಾಗಿತ್ತು. ಆದರೆ, ಮಕ್ಕಳ ಹಕ್ಕು ಆಯೋಗ ಹಾಗೂ ಕೆಲವು ಖಾಸಗಿ ಶಾಲೆಗಳ ಮುಖ್ಯಸ್ಥರು ಆಕ್ಷೇಪ ಎತ್ತಿದ್ದರು. ಪ್ರಸ್ತಾವನೆ ಹಿಂದಿನ ಆಶಯವನ್ನು ಈಗಾಗಲೇ ಆಯೋಗದ ಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದೇವೆ. ಇಂದು ಮತ್ತೂಮ್ಮೆ ಸಭೆ ನಡೆಸಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next