Advertisement

ಕೃಷಿ ಭೂಮಿ ಕನ್ವರ್ಷನ್ ಸರಳೀಕರಣಗೊಳಿಸಲು ಮುಂದಾದ ಸರ್ಕಾರ

10:14 AM Dec 22, 2022 | Team Udayavani |

ಬೆಳಗಾವಿ: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

Advertisement

ಇದೇ ಅಧಿವೇಶನದಲ್ಲಿ ಈ ಸಂಬಂಧ ವಿಧೇಯಕ ಕೂಡ ತರಲು ಉದ್ದೇಶಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಸದಸ್ಯ ಮಂಜುನಾಥ ಭಂಡಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೃಷಿಯೇತರ ಭೂ ಪರಿವರ್ತನೆಗಾಗಿ ಆನ್‌ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ಆ ಬಗ್ಗೆ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಅವರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ:ಗುಜರಾತ್: ಆಪರೇಷನ್ ಥಿಯೇಟರ್ ನ ಕಪಾಟಿನಲ್ಲಿ ಮಗಳ, ಬೆಡ್ ಕೆಳಗೆ ತಾಯಿ ಶವ ಪತ್ತೆ!

ಕೃಷಿ ಭೂಮಿ ಪರಿವರ್ತನೆ ವಿಚಾರದಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಭ್ರಷ್ಟಾಚಾರಕ್ಕೆ ದಾರಿಯಾಗುತ್ತಿದೆ ಎಂದು ಸಾರ್ವಜನಿಕರ ಮಧ್ಯೆ ಆರೋಪ‌ ಇರುವಾಗಲೇ ರಾಜ್ಯ ಸರ್ಕಾರ ಈ ಮಹತ್ವದ ನಿರ್ಣಯ ತೆಗೆದುಕೊಂಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next