Advertisement

ಇನ್ನು ನಾಲ್ಕೈದು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ನೂತನ ಸರಕಾರ: ರಾವತ್

10:07 AM Nov 21, 2019 | Hari Prasad |

ಮುಂಬೈ: ಮಹಾರಾಷ್ಟ್ರ ಸರಕಾರ ರಚನೆಯ ಸರ್ಕಸ್ ಕೊನೆಗೂ ಒಂದು ಹಂತಕ್ಕೆ ಬಂದು ನಿಲ್ಲುವ ಲಕ್ಷಣಗಳು ಗೋಚರಿಸಿವೆ. ರಾಷ್ಟ್ರಪತಿ ಆಡಳಿತ ಜಾರಿಗೊಂಡಿರುವ ಮಹಾರಾಷ್ಟ್ರದಲ್ಲಿ ಇನ್ನು ನಾಲ್ಕೈದು ದಿನಗಳಲ್ಲಿ ಶಿವಸೇನೆ-ಎನ್.ಸಿ.ಪಿ.-ಕಾಂಗ್ರೆಸ್ ನೇತೃತ್ವದ ನೂತನ ಸರಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ಮಹಾರಾಷ್ಟ್ರದಲ್ಲಿ ಶಿವಸೇನೆಗೆ ಬೆಂಬಲ ನೀಡಲು ತಮ್ಮ ಒಪ್ಪಿಗೆಯನ್ನು ನೀಡಿದ್ದರು. ಸೋಮವಾರವಷ್ಟೇ ಎನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ್ ಅವರು ಸೋನಿಯಾ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲೇ ಶಿವಸೇನೆಗೆ ಬೆಂಬಲ ನೀಡುವ ಕುರಿತಾಗಿ ಚರ್ಚೆ ನಡೆದಿತ್ತು ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಮಹಾರಾಷ್ಟ್ರದಲ್ಲಿ ಸರಕಾರ ರಚನೆಗೆ ಸಾಮಾನ್ಯ ಕಾರ್ಯಸೂಚಿಗೆ ಒಪ್ಪಿಕೊಂಡಿದ್ದಾರೆ ಎಂದು ಉಭಯ ಪಕ್ಷಗಳ ನಾಯಕರು ಶಿವಸೇನೆಗೆ ಮನವರಿಕೆ ಮಾಡಿದ್ದಾರೆ ಎಂದು ಸಂಜಯ್ ರಾವತ್ ಅವರು ತಿಳಿಸಿದರು.

ಮಹಾರಾಷ್ಟ್ರದ ಜನತೆ ಶಿವಸೇನೆಯ ವ್ಯಕ್ತಿ ಮುಖ್ಯಮಂತ್ರಿಯಾಗುವುದನ್ನು ಎದುರು ನೋಡುತ್ತಿದ್ದಾರೆ. ರಾಜ್ಯದಲ್ಲಿ ಸ್ಥಿರ ಸರಕಾವನ್ನು ನೀಡುವ ನಿಟ್ಟಿನಲ್ಲಿ ಪ್ರಯತ್ನಗಳು ಇಂದಿನಿಂದ ಪ್ರಾರಂಭಗೊಂಡಿದೆ ಮತ್ತಿದು ನಾಲ್ಕೈದು ದಿನಗಳಲ್ಲಿ ಇದು ಪೂರ್ಣಗೊಳ್ಳಲಿದೆ ಎಂದು ರಾವತ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next