Advertisement

ಪೆಟ್ರೋಲ್, ಡೀಸೆಲ್ ವಾಹನ ನಿಷೇಧವಿಲ್ಲ

11:34 AM Sep 07, 2019 | Team Udayavani |

ಹೊಸದಿಲ್ಲಿ: ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ನಿಷೇಧ ಮಾಡುವ ಪ್ರಸ್ತಾವ ಕೇಂದ್ರದ ಮುಂದೆ ಇಲ್ಲ ಎಂದು ರಸ್ತೆ ಮತ್ತು ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

Advertisement

ಹೊಸದಿಲ್ಲಿಯಲ್ಲಿ ಗುರುವಾರ ಸೊಸೈಟಿ ಆಫ್ ಇಂಡಿಯನ್‌ ಅಟೊಮೊಬೈಲ್ ಮ್ಯಾನ್ಯುಫ್ಯಾಕ್ಚರರ್ಸ್‌ (ಎಸ್‌ಐಎಎಂ)ನ 59ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು. ಆರ್ಥಿಕ ಕ್ಷೇತ್ರದಲ್ಲಿನ ನಿಧಾನಗತಿಯ ಬೆಳವಣಿಗೆ ಹಿನ್ನೆಲೆಯಲ್ಲಿ ತೊಂದರೆಗೆ ಈಡಾಗಿರುವ ಅಟೊಮೊಬೈಲ್ ಕ್ಷೇತ್ರಕ್ಕೆ ಎಲ್ಲ ರೀತಿಯ ನೆರವು ನೀಡಲಾಗುತ್ತದೆ. ಜಿಎಸ್‌ಟಿ ಪ್ರಮಾಣದಲ್ಲಿ ಇಳಿಕೆ ಮಾಡುವ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಜತೆ ಮಾತುಕತೆ ನಡೆಸುವುದಾಗಿ ವಾಗ್ಧಾನ ಮಾಡಿದ್ದಾರೆ.

ಮುಂದಿನ 3 ತಿಂಗಳಲ್ಲಿ 5 ಲಕ್ಷ ಕೋಟಿ ರೂ. ಮೌಲ್ಯದ 68 ರಸ್ತೆ ಯೋಜನೆಗಳಿಗೆ ಅನುಮೋದನೆ ನೀಡಲಾಗುತ್ತದೆ ಎಂದಿದ್ದಾರೆ. ಬಿಎಸ್‌ 6 ವ್ಯವಸ್ಥೆ ಇರಲಿರುವ ವಾಹನಗಳಿಗೆ ಹೆಚ್ಚು ವೆಚ್ಚವಾಗಲಿರುವ ಹಿನ್ನೆಲೆಯಲ್ಲಿ ತೆರಿಗೆ ವಿಚಾರದಲ್ಲೂ ನೆರವಾಗಬೇಕು ಎಂಬ ವಾಹನೋದ್ಯಮಿಗಳ ಬೇಡಿಕೆಗೆ ಉತ್ತರಿಸಿದ ಸಚಿವರು, ಜಿಎಸ್‌ಟಿ ಪ್ರಮಾಣವನ್ನು ಶೇ.12ರಿಂದ ಶೇ.5ಕ್ಕೆ ಇಳಿಕೆ ಮಾಡುವಂತೆ ವಿತ್ತ ಸಚಿವರ ಜತೆ ಚರ್ಚಿಸುವುದಾಗಿ ಹೇಳಿದ್ದಾರೆ.

ಉದ್ಯೋಗ ನಷ್ಟ ಸಾಧ್ಯತೆ
ಮಂದಗತಿಯ ಆರ್ಥಿಕ ಬೆಳವಣಿಗೆ ಹಿನ್ನೆಲೆಯಲ್ಲಿ ಜಿಎಸ್‌ಟಿ ಪ್ರಮಾಣದಲ್ಲಿ ಕಡಿಮೆ ಮಾಡಬೇಕು ಎಂದು ಅಟೊಮೊಬೈಲ್ ಉದ್ದಿಮೆಯು ಸರಕಾರಕ್ಕೆ ಮನವಿ ಮಾಡಿದೆ. ಇದರ ಜತೆಗೆ ಆರ್ಥಿಕ ಬಿಕ್ಕಟ್ಟು ಹೀಗೇ ಮುಂದುವರಿದರೆ ಉದ್ಯೋಗ ನಷ್ಟ ಉಂಟಾಗಲಿದೆ ಎಂದು ಸೊಸೈಟಿ ಆಫ್ ಇಂಡಿಯನ್‌ ಅಟೊ ಮೊಬೈಲ್ ಮ್ಯಾನ್ಯುಫ್ಯಾಕ್ಚರರ್ಸ್‌ (ಎಸ್‌ಐಎಎಂ) ಕಳವಳ ವ್ಯಕ್ತಪಡಿಸಿದೆ. ಬಿಎಸ್‌ 6 ಮಾದರಿಯ ಪರಿಸರ ರಕ್ಷಣೆಯ ವ್ಯವಸ್ಥೆಯನ್ನು ಹೊಸ ವಾಹನ ಗಳಲ್ಲಿ ಅಳವಡಿಸಿಕೊಳ್ಳಲಿರುವ ಹಿನ್ನೆಲೆಯಲ್ಲಿ ದರ ಹೆಚ್ಚಾಗಲಿದೆ ಎಂದೂ ಅದು ಆತಂಕ ವ್ಯಕ್ತಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next