Advertisement

ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪುವಂತಾಗಬೇಕು: ಶಾಸಕ ಕೆ.ಮಹದೇವ್

05:51 PM Mar 19, 2022 | Team Udayavani |

ಪಿರಿಯಾಪಟ್ಟಣ: ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತ್ ರಾಜ್  ಇಲಾಖೆಗಳು ಒಂದೇ ನಾಣ್ಯದ ಎರಡು ಮುಖಗಳಂತಿದ್ದು. ಇವುಗಳ ಉಪಯೋಗಗಳು ಗ್ರಾಮೀಣ ಜನರಿಗೆ ಸಮರ್ಪಕವಾಗಿ ತಲುಪುವಂತಾಗಬೇಕು ಎಂದು ಶಾಸಕ ಕೆ.ಮಹದೇವ್. ತಿಳಿಸಿದರು.

Advertisement

ತಾಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮದಲ್ಲಿ ಕಂದಾಯ ಇಲಾಖೆ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮೀಣ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಸರ್ಕಾರ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅಧಿಕಾರಿಗಳು ಸಾರ್ವಜನಿಕರು ಅಹವಾಲುಗಳಾಗಿ ನೀಡುವ ಸಮಸ್ಯೆಗಳನ್ನು ಆದೇಶವಾಗಿ ಶೀಘ್ರಗತಿಯಲ್ಲಿ ಮಾಡಿಕೊಡಬೇಕು. ಸರ್ಕಾರ ದಿನೇದಿನೇ ಹೊಸಹೊಸ ಕಾಯಿದೆಗಳನ್ನು ಜಾರಿಗೆ ತಂದು ರೈತರಿಗೆ ನೆರವಾಗಲು ಯೋಜನೆ ರೂಪಿಸುತ್ತಿದೆ ಆದರೆ ಗ್ರಾಮಾಂತರ ಪ್ರದೇಶದ ರೈತರು ಎರಡು-ಮೂರು ತಲೆಮಾರು ಉರುಳಿದ್ದರೂ ಜಮೀನಿನ ದಾಖಲೆ ಹಾಗೂ ಇನ್ನಿತರ ಆಸ್ತಿ ಪತ್ರಗಳನ್ನು ತಮ್ಮ ಹೆಸರಿಗೆ ಬದಲಾವಣೆ ಮಾಡಿಕೊಂಡಿಲ್ಲದ ಕಾರಣ ಅವರಿಗೆ ಸಿಗಬೇಕಾದ ಸವಲತ್ತುಗಳು ಸಮರ್ಪಕವಾಗಿ ಸಿಗದೆ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ರೈತರು ಆಸ್ತಿಯ ದಾಖಲಾತಿಗಳ ಸರಿಪಡಿಸದಿದ್ದರೆ ಮುಂದಿನ ತಲೆಮಾರಿಗೆ ತೊಂದರೆ ಅನುಭವಿಸಬೇಕಾಗುತ್ತದೆ ಆದ್ದರಿಂದ ರೈತರು ತಮ್ಮ ಆಸ್ತಿಯನ್ನು ಉಳಿಸಿಕೊಳ್ಳಲು ಆದ್ಯತೆ ನೀಡಬೇಕು. ಇದಕ್ಕಾಗಿ ಕಂದಾಯ ಇಲಾಖೆಯ ಮೂಲಕ ರೈತರ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯನ್ನು ಜಾರಿಗೆ ತಂದಿದೆ ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರೈತರಿಗೆ ಹೇಳಿದರು.

ತಹಸಿಲ್ದಾರ್ ಕೆ.ಚಂದ್ರಮೌಳಿ ಮಾತನಾಡಿ ಸರ್ಕಾರ ಕಂದಾಯ ಅದಾಲತ್ ಮೂಲಕ ಪಾಣಿ ತಿದ್ದುಪಡಿ ಸೇರಿದಂತೆ ದೋಷಪೂರಿತ ದಾಖಲೆಗಳ ತಿದ್ದುಪಡಿ ಮಾಡಿ ರೈತರ ಮನೆ ಬಾಗಿಲಿಗೆ ಕಂದಾಯ ದಾಖಲೆಗಳನ್ನು ತಲುಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಅಧಿಕಾರಿಗಳು ಫಲಾನುಭವಿಗಳನ್ನು ಗುರತಿಸಿ ಮಾಸಾಶನ, ವೃದ್ದಾಪ್ಯ ವೇತನ, ಸೇರಿದಂತೆ ಇನ್ನಿತರ ಯೋಜನೆಯನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಗ್ರಾಮದ ಸಮಸ್ಯೆಯನ್ನು ಲಿಖಿತವಾಗಿ ಅಧಿಕಾರಿಗಳಿಗೆ ನೀಡಿದರೆ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಾರೆ. ಸರ್ಕಾರದ ಯೋಜನೆಯಂತೆ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ ಜನರಿಂದ ಬರುವ ಅರ್ಜಿಗಳನ್ನು ಪಡೆಸು ಸ್ಥಳದಲ್ಲೇ ವಿಲೇವಾರಿ ಮಾಡಲಾಗುವುದು. ಸಾಧ್ಯವಾಗದೇ ಹೋದಲ್ಲಿ ಸ್ವಲ್ಪ ಕಾಲಾವಕಾಶ ಪಡೆದು ಅರ್ಜಿ ವಿಲೇವಾರಿ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ತಾಪಂ ಇಓ ಕೃಷ್ಣಕುಮಾರ್ ಪಿಡಿಒ ದೇವರಾಜೇಗೌಡ, ಗ್ರಾಪಂ ಅಧ್ಯಕ್ಷೆ ಛಾಯಮಣಿ ಮಹದೇವ್, ಮಾಜಿ ಅಧ್ಯಕ್ಷೆ ಮೀನಾಕ್ಷಮ್ಮ, ಉಪಾಧ್ಯಕ್ಷ ಮಂಜುನಾಥ್, ಸದಸ್ಯರಾದ ಅನಿಲ್ ಕುಮಾರ್, ಕಾಮರಾಜು, ಹೆಚ್.ಸಿ.ಮಹದೇವ್, ಸೀಗೂರು ವಿಜಯಕುಮಾರ್, ಸುಧಾ ಮಹದೇವ್,  ಯಶೋಧಮ್ಮ, ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಪ್ರಸಾದ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರತ್ ಬಾಬು, ತೋಟಗಾರಿಕೆ ಇಲಾಖೆ ಸಹಾಯಕ ಪ್ರಸಾದ್, ಸಿಡಿಪಿಒ ಕುಮಾರ್, ಸಮಾಜ ಕಲ್ಯಾಣಾಧಿಕಾರಿ ಸಿದ್ದೇಗೌಡ, ಎಇಇಗಳಾದ ಮಂಜುನಾಥ್, ಜಯಂತ್, ಪ್ರಭು, ಶರತ್, ಕಂದಾಯ ನಿರೀಕ್ಷಕ ಶ್ರೀಧರ್, ಗ್ರಾಮ ಲೆಕ್ಕಾಧಿಕಾರಿ ಮನುಕುಮಾರ್, ಮುಖಂಡರಾದ ಅಣ್ಣಯ್ಯಶೆಟ್ಟಿ, ಜಯಶಂಕರ್, ವಿನೋದ್, ಹೆಚ್.ಇ.ಶಂಕರ್, ಜಗಪಾಲ್, ಆಯಿತನಹಳ್ಳಿ ಮಹದೇವ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next