ತುಮಕೂರು: ಕೋವಿಡ್ 19 ಸಂದರ್ಭದಲ್ಲಿ ಜನರ ಸಮಸ್ಯೆಗೆ ಸ್ಪಂದಿಸದ ಸರ್ಕಾರದ ವಿರುದಟಛಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ದೇಶಾದ್ಯಂತ ಜು.3ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಮತ್ತು ಗ್ರಾಮೀಣ ಪ್ರದೇಶ ದಲ್ಲಿ ಲಕ್ಷಾಂತರ ಮಂದಿ ಉದ್ಯೋಗ ಕಳೆದು ಕೊಂಡಿದ್ದಾರೆ.
ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ರೈತರು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ಆಗಿಲ್ಲ ಎಂದು ದೂರಿದರು. ವೈದ್ಯಕೀಯ ತುರ್ತುಪರಿಸ್ಥಿತಿ ಯನ್ನು ಸರ್ಕಾರಗಳು ಕಾನೂನು ಸುವ್ಯ ವಸ್ಥೆಯ ಪರಿಸ್ಥಿತಿಯನ್ನಾಗಿ ನೋಡುತ್ತಿರು ವುದು ಸರಿಯಲ್ಲ. ವೈದ್ಯಕೀಯ ಚಿಕಿತ್ಸೆ ಕೊಡಬೇಕಾದ ಸರ್ಕಾರ ಪ್ರಜಾಸತ್ತಾತ್ಮಕತೆಗೆ ದ್ರೋಹ ಬಗೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ 19 ಸೋಂಕು ನಿವಾರಣೆಗೆ ಶ್ರಮಿಸಬೇಕಿದ್ದ ಸರ್ಕಾರಗಳು ಜನವಿರೋಧಿ ಕಾರ್ಯದಲ್ಲಿ ನಿರತವಾಗಿವೆ ಎಂದು ಆಪಾದಿಸಿದರು.
ಎಪಿಎಂಸಿ, ಭೂಸುಧಾರಣೆ, ಅಗತ್ಯಸೇವೆ, ವಿದ್ಯುತ್, ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ಹೊರಟಿದ್ದು ಯಾರ ಹಿತಕಾಯಲು ತಿದ್ದುಪಡಿ ಮಾಡುತ್ತಿದ್ದಾರೆ. ಕಾಯ್ದೆಗಳ ತಿದ್ದುಪಡಿ ಕುರಿತು ಪಾರ್ಲಿಮೆಂಟ್, ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಚರ್ಚಿಸದೇ ಏಕಪಕ್ಷೀಯವಾಗಿ ಹೇರಿಕೆ ಮಾಡಲಾಗುತ್ತಿದೆ. ಇದು ಖಂಡನೀಯ ಎಂದರು. ಪ್ರತಿಕುಟುಂಬಕ್ಕೂ 7,500 ರೂ. ನೀಡ ಬೇಕು. ಪ್ರತಿವ್ಯಕ್ತಿಗೆ 10 ಕೇಜಿ ಪಡಿತರ ನೀಡಬೇಕು.
ಇದರಲ್ಲಿ ಜೀವನಾವಶ್ಯಕ ವಸ್ತುಗಳು ಇರಬೇಕು. ಆರು ತಿಂಗಳು ಉಚಿತವಾಗಿ ನೀಡಬೇಕು. ಹಾಗೆಯೇ ಜನರ ಹಕ್ಕು ದಮನ ಮಾಡುವುದನ್ನು ನಿಲ್ಲಿಸಬೇಕು. ಕೋವಿಡ್ 19 ವಾರಿಯರ್ಗಳಿಗೆ ಸೂಕ್ತ ಭದ್ರತೆ ನೀಡಬೇಕು. ಜನರು ಕಾರ್ಮಿಕರು ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಗಿರೀಶ್ ಮಾತನಾಡಿ, ನವರತ್ನ ಕಂಪನಿ ಗಳನ್ನು ಖಾಸಗೀಕರಣ ನಿಲ್ಲಿಸಬೇಕು.
ಬಂಡವಾಳ ಹಿಂತೆಗೆತ ದಿಂದ ಕಾರ್ಪೋರೆಟ್ ಕಂಪನಿಗಳಿಗೆ ಲಾಭ ಮಾಡಿಕೊಡಲು ಸರ್ಕಾರ ಹೊರಟಿದೆ. ದೇಶದಲ್ಲಿ ಆರ್ಥಿಕತೆ ಕುಸಿದಿದ್ದು ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣವಾಗಿದೆ ಎಂದು ಟೀಕಿಸಿದರು. ಐಎನ್‌ಟಿಯುಸಿ ಮುಖಂಡ ಬಿ.ಎಚ್. ರಾಜು ಮಾತನಾಡಿ, ಕೋವಿಡ್ ನಿಯಂತ್ರಿಸಿ ಜನರನ್ನು ಸಂರಕ್ಷಿಸಬೇಕಾದ ಕೇಂದ್ರ, ರಾಜ್ಯ ಸರ್ಕಾರಗಳು ಕೈಚೆಲ್ಲಿ ಕೂತಿವೆ. ದೇಶದಲ್ಲಿ ಕೋವಿಡ್ ನಿಯಂತ್ರಿಸಿ ಜನರ ಆರ್ಥಿಕತೆ ಉತ್ತಮ ಪಡಿಸಬೇಕಾದ ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ರಾಜ್ಯಗಳಿಗೆ ವರ್ಗಾಯಿಸಿದೆ ಎಂದು ಆರೋಪಿಸಿದರು.