Advertisement

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

03:36 AM Oct 23, 2024 | Team Udayavani |

ಬೆಂಗಳೂರು: ಕಳೆದ 2023-24ರ ಶೈಕ್ಷಣಿಕ ವರ್ಷದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾವಾರು ಮತ್ತು ತಾಲೂಕುವಾರು ಗರಿಷ್ಠ ಅಂಕ ಪಡೆದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ರೂಪವಾಗಿ ಲ್ಯಾಪ್‌ಟಾಪ್‌ ನೀಡಲು ಸರಕಾರ ಮುಂದಾಗಿದೆ.

Advertisement

ಜಿಲ್ಲಾ ಮತ್ತು ತಾಲೂಕುವಾರು ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಲಾಗುತ್ತದೆ. ಅತೀ ಹೆಚ್ಚು ಅಂಕ ಪಡೆದ ತಲಾ ಮೂವರು ವಿದ್ಯಾರ್ಥಿಗಳು ಲ್ಯಾಪ್‌ಟಾಪ್‌ ಪಡೆಯಲು ಅರ್ಹರಾಗಿರುತ್ತಾರೆ. ಈ ಸಂಬಂಧ 3.96 ಕೋಟಿ ರೂ. ಮೊತ್ತದ ಟೆಂಡರ್‌ ಕೂಡ ಸರಕಾರ ಕರೆದಿದೆ.

ಒಟ್ಟು 810 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಲಭಿಸುವ ಸಾಧ್ಯತೆ ಇದೆ. ಈ ಸಂಬಂಧ ಟಾಪರ್‌ಗಳ ಪಟ್ಟಿಯನ್ನು ಕಳುಹಿಸಿ ಕೊಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆಯಾ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next