Advertisement

ನೆಲಮಂಗಲ: ಜೀರೋ ಟ್ರಾಫಿಕ್‌ನಲ್ಲಿ ಬೆಂಗಳೂರಿಗೆ ಬಂದ ರಾಜ್ಯಪಾಲರು

02:59 PM Sep 16, 2021 | Team Udayavani |

ನೆಲಮಂಗಲ: ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹಲೋತ್‌ ಅವರು ಆದಿಚುಂಚನಗಿರಿಯಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜೀರೋ ಟ್ರಾಫಿಕ್‌  ಮೂಲಕ ‌ ನೆಲಮಂಗಲ ಮಾರ್ಗವಾಗಿ ಬೆಂಗಳೂರಿಗೆ ತಲುಪಿದರು.

Advertisement

ರಾಜ್ಯಪಾಲರು ನೆಲಮಂಗಲ ತಾಲೂಕಿನ ಗಡಿ ಪ್ರವೇಶಿಸುತ್ತಿದ್ದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಜೀರೋ ಟ್ರಾಫಿಕ್‌ ನಿರ್ವಹಣೆ ಮಾಡಿದರೆ ನೆಲ ಮಂಗಲ ನಗರದಲ್ಲಿ ಟೌನ್‌ ಪೊಲೀಸರು ನಂತರ ಮಾದನಾಯಕನಹಳ್ಳಿ ಪೊಲೀಸರು ಸಂಪೂರ್ಣ ಭದ್ರತೆ ನೀಡಿದರು.

ಟ್ರಾಫಿಕ್‌ ಜಾಮ್‌: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜೀರೋ ಟ್ರಾಫಿಕ್‌ ವ್ಯವಸ್ಥೆ ಮಾಡಿದ ಪರಿಣಾಮ ಅರ್ಧಗಂಟೆಗೂ ಹೆಚ್ಚು ಸರ್ವಿಸ್‌ ರಸ್ತೆಗಳಲ್ಲಿ  ಟ್ರಾಫಿಕ್‌ ಜಾಮ್‌ ಉಂಟಾಗಿ ವಾಹನ ಸವಾರರು ಪರದಾಡಿದರು.

ಇದನ್ನೂ ಓದಿ:ಗಡಿಗ್ರಾಮಗಳಲ್ಲಿ ನರೇಗಾ ಕಾಮಗಾರಿ ಕಳಪೆ!

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next