ಬೆಂಗಳೂರು: ನಾನು ಅಸಮಾನತೆ ವಿರುದ್ಧ ಕಾರ್ಯಕ್ರಮಗಳನ್ನು ನೀಡುತ್ತೇನೆಂಬ ಕಾರಣ ಕ್ಕಾಗಿಯೇ ಬಿಜೆಪಿ ನನ್ನನ್ನು ಸಹಿಸುತ್ತಿಲ್ಲ. ಅದೇ ಕಾರಣಕ್ಕೆ ನನ್ನನ್ನು ಗುರಿಯಾಗಿಸಿ ಸುಳ್ಳು ಆರೋಪ ಮಾಡಲಾಗುತ್ತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಜಯಂತಿ ಕಾರ್ಯಕ್ರಮದಲ್ಲಿ ಉಭಯ ನಾಯಕರಿಗೆ ಗೌರವ ಸಲ್ಲಿಸಿ ಮಾತನಾಡಿ, ಅಧಿಕಾರಕ್ಕೆ ಬಂದ ಕೇವಲ 1 ವರ್ಷದಲ್ಲೇ ಬಡವರ ಪರ ಇರುವ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಇದಕ್ಕೆ ಹೊಟ್ಟೆಯುರಿಯಿಂದ ಮಾಡಬಾರದ್ದನ್ನೆಲ್ಲ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಸಚಿವರಾದ ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹಮದ್, ಕೆಪಿಸಿಸಿ ಕಾರ್ಯಾ ಧ್ಯಕ್ಷ ಜಿ.ಸಿ. ಚಂದ್ರಶೇಖರ್ ಇದ್ದರು.
ಮೇಕ್ ಇನ್ ಇಂಡಿಯಾ ನೆಹರು ಕೊಡುಗೆ: ಜಾರ್ಜ್
ಇಂಧನ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗ ಜನಸಂಖ್ಯೆ 30 ಕೋಟಿ ಇತ್ತು. ಆಗ, ಅನ್ನವಿಲ್ಲದೆ ಲಕ್ಷಾಂತರ ಜನ ಅಸು ನೀಗಿದರು.
ಯಾವುದೇ ಕಾರ್ಖಾನೆ ಇರಲಿಲ್ಲ. ಆಗ ದೇಶವನ್ನು ಸಂಪದ್ಭರಿತ ಮಾಡಿದ್ದು ಕಾಂಗ್ರೆಸ್. “ಮೇಕ್ ಇನ್ ಇಂಡಿಯಾ’ ಪ್ರಧಾನಿ ನರೇಂದ್ರ ಮೋದಿ ಅವರ ಪರಿಕಲ್ಪನೆ ಅಲ್ಲ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕೊಡುಗೆ. ಸಮಾನತೆ ಬಯಸುವ ಪಕ್ಷ ಕಾಂಗ್ರೆಸ್ ಎಂದು ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನಿಲ್ಲ ಅಂತ ಟೀಕಿಸುವವರಿಗೆ ತಿರುಗೇಟು ನೀಡಿದರು.