ಬೆಂಗಳೂರು: ರಾಜ್ಯ ಸರಕಾರ ಜಾರಿ ಮಾಡಲು ಹೊರಟಿರುವ ಮಹತ್ವದ ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಅಂಕಿತ ಹಾಕಿದ್ದಾರೆ.
ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2021 ರ ಅಧ್ಯಾದೇಶಕ್ಕೆ ರಾಜ್ಯಪಾಲರ ಒಪ್ಪಿಗೆ ದೊರಕಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಮತಾಂತರ ವಿರೋಧಿ ಮಸೂದೆಗೆ ಈಗಾಗಲೇ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸಂಪುಟ ಅನುಮೋದನೆ ನೀಡಿದ್ದು, ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಸರಕಾರ ಹೇಳಿದ್ದು, ಅಲ್ಲಿಯವರೆಗೆ ಸುಗ್ರೀವಾಜ್ಞೆ ಜಾರಿಯಲ್ಲಿಡಲಾಗುತ್ತದೆ ಎಂದು ತಿಳಿಸಿದೆ.
ಇದನ್ನೂ ಓದಿ : ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ ?: ವಿವರ ಕೇಳಿದ ಸುಪ್ರೀಂ
ಕಳೆದ ವರ್ಷ ಡಿಸೆಂಬರ್‌ನಲ್ಲಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದರೆ, ವಿಧಾನ ಪರಿಷತ್ತಿನಲ್ಲಿ ಅದರ ಅಂಗೀಕಾರ ಬಾಕಿ ಉಳಿದಿತ್ತು.