Advertisement
ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಅವರ 66ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ವಿಜ್ಞಾನ ಸಂಕಿರಣದ ಎದುರು ಡಾ| ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಮೂಲಕ 14.30 ಲಕ್ಷ ರೂ. ವಚ್ಚದಲ್ಲಿ ಸ್ಥಾಪಿಸಲಾಗಿರುವ ಬಾಬಾಸಾಹೇಬರ 9 ಅಡಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ ಬಳಿಕ ಮಂಗಳಾ ಸಭಾಂಗಣದಲ್ಲಿ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಧ್ಯಪ್ರದೇಶದ ಸರಕಾರದಲ್ಲಿ ನಾನು ಗ್ರಾಮೀಣಾಭಿವೃದ್ಧಿ ಸಚಿವನಾ ಗಿ ದ್ದಾಗ ಅಂಬೇಡ್ಕರ್ ಅವರ ಜನ್ಮಸ್ಥಳ ವಾದ ಮಾಹೋದಲ್ಲಿ ಸ್ಮಾರಕ ನಿರ್ಮಾಣಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಭೂಮಿ ಪೂಜೆ ಮಾಡಿದ್ದರು. 10 ವರುಷ ಬೇರೆ ಸರಕಾರ ಇದ್ದಾಗ ನೆನೆಗುದಿಗೆ ಬಿದ್ದಿತ್ತು. ಬಿಜೆಪಿ ಸರಕಾರ ಬಂದ ಬಳಿಕ 14 ಕೋಟಿ ರೂ. ವೆಚ್ಚದಲ್ಲಿ ಅವರ ಸ್ಮಾರಕ ನಿರ್ಮಾಣ ಕಾರ್ಯ ಪೂರ್ಣಗೊಂಡಿತು. ಈಗಿನ ಪ್ರಧಾನಿ ನರೇಂದ್ರ ಮೋದಿಯವರ ಅವಧಿಯಲ್ಲಿ ಅಂಬೇಡ್ಕರ್ ಅವರನ್ನು ಎಲ್ಲರೂ ಅರಿಯಬೇಕು ಎಂಬ ಉದ್ದೇಶದಿಂದ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರವನ್ನು ಸ್ಥಾಪಿಸಿ ದ್ದಾರೆ. ಅಂಬೇಡ್ಕರ್ ಅವರ ಜನ್ಮಭೂಮಿ, ಶಿûಾ ಭೂಮಿ, ಕರ್ಮ ಭೂಮಿ, ದೀûಾ ಭೂಮಿ, ಪರಿನಿರ್ವಾಣ ಭೂಮಿ ಹಾಗೂ ಚೈತ್ಯ ಭೂಮಿಗಳನ್ನು ಅಭಿವೃದ್ಧಿ ಪಡಿಸುವ ಕಾರ್ಯ ನಡೆದಿದ್ದು ಈ ಪ್ರದೇಶಗಳು ಈಗ ಅಂಬೇಡ್ಕರ್ ಅವರ ಸಮಗ್ರ ಪರಿಚಯ ನೀಡುತ್ತವೆ ಎಂದರು.
Related Articles
Advertisement
ಕುಲಸಚಿವ ಡಾ| ಸಿ.ಕೆ. ಕಿಶೋರ್ ಕುಮಾರ್, ಪರೀûಾಂಗ ಕುಲಸಚಿವ ಡಾ| ಪಿ.ಎಲ್. ಧರ್ಮ, ಸಿಂಡಿಕೇಟ್ ಸದಸ್ಯರು ಸೇರಿದಂತೆ ಗಣ್ಯರು ಉಪ ಸ್ಥಿತರಿದ್ದರು. ಕುಲಪತಿ ಪ್ರೊ| ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಸ್ವಾಗ ತಿಸಿ, ಡಾ| ಬಿ.ಆರ್. ಅಂಬೇಡ್ಕರ್ ಅಧ್ಯ ಯನ ಕೇಂದ್ರದ ನಿರ್ದೇಶಕ ಪ್ರೊ| ವಿಶ್ವನಾಥ ವಂದಿಸಿದರು. ಪ್ರಾಧ್ಯಾಪಕ ರಾದ ಡಾ| ಧನಂಜಯ ಕುಂಬ್ಳೆ ಹಾಗೂ ಪ್ರೀತಿ ಕೀರ್ತಿ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು.
ಅಂಬೇಡ್ಕರ್ ಅಧ್ಯಯನ ಪೀಠ ಸ್ಥಾಪಿಸಿಅಂಬೇಡ್ಕರ್ ಪುತ್ಥಳಿ ಸ್ಥಾಪಿಸಿದ ಮಂಗಳೂರು ವಿ.ವಿ.ಯನ್ನು ಅಭಿನಂದಿಸಿದ ರಾಜ್ಯಪಾಲರು, ಪುತ್ಥಳಿಯು ಅವರ ಸತ್ಕರ್ಮಗಳನ್ನು ಅರಿತು ಅಳವಡಿಸಿಕೊಳ್ಳಲು ಸಹಕಾರಿ. ಅಂಬೇಡ್ಕರ್ ವಿಚಾರದಲ್ಲಿ ಹೆಚ್ಚಿನ ಅಧ್ಯಯನಕ್ಕೆ ಮಂಗಳೂರು ವಿ.ವಿ.ಯಲ್ಲಿ ಅಂಬೇಡ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ನನಗೆ ಮಾಹಿತಿ ನೀಡಿ. ಪೀಠ ಸ್ಥಾಪನೆಗೆ ಅಗತ್ಯ ಬೆಂಬಲ ನೀಡಲು ಸಿದ್ಧನಿದ್ದೇನೆ ಎಂದು ರಾಜ್ಯಪಾಲರು ಭರವಸೆ ನೀಡಿದರು.