ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾ| ರಿತು ರಾಜ್ ಅವಸ್ಥಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಲ್ಲೋತ್ ನೂತನ ಮುಖ್ಯ ನ್ಯಾಯ ಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಅಲಹಾಬಾದ್ ಹೈಕೋರ್ಟಿನ ನ್ಯಾಯಮೂರ್ತಿಗಳಾಗಿದ್ದ ನ್ಯಾ| ರಿತು ರಾಜ್ ಅವಸ್ಥಿ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯ ಮೂರ್ತಿಗಳಾಗಿ ನೇಮಕ ಮಾಡಿ ಕೇಂದ್ರ ಸರಕಾರ ಅ.9ರಂದು ಆದೇಶ ಹೊರಡಿಸಿತ್ತು.
ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ, ಸಚಿವರಾದ ಗೋವಿಂದ ಎಂ. ಕಾರಜೋಳ, ಬಿ.ಸಿ.ಪಾಟೀಲ್ ವಿಧಾನಸಭೆ ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ಕೆ. ನಾವದಗಿ, ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸಹಿತ ಹಲವು ಗಣ್ಯರು, ಹೈಕೋರ್ಟ್‌ನ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:ಹಣ ಕಂಡ್ರೆ ಬಾಯಿಬಿಡುವ ಕಿಮ್! ಬಿಬಿಸಿ ಸಂದರ್ಶನದಲ್ಲಿ ಸೇನಾ ಕಮಾಂಡರ್ ಮಾಹಿತಿ