Advertisement

ಸಮಾಜದ ದುರ್ಬಲ ವರ್ಗಗಳ ಏಳಿಗೆಗೆ ನನ್ನ ಸರ್ಕಾರ ಬದ್ಧ: ರಾಜ್ಯಪಾಲರ ಗಣರಾಜ್ಯೋತ್ಸವ ಸಂದೇಶ

10:07 AM Jan 26, 2022 | Team Udayavani |

ಬೆಂಗಳೂರು: “ನನ್ನ ಸರ್ಕಾರ ಸಮಾಜದ ದುರ್ಬಲ ವರ್ಗಗಳು ವಿಶೇಷವಾಗಿ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿಗಳ ಜೀವನದ ಹಾಗೂ ಆರ್ಥಿಕತೆಯ ಎಲ್ಲಾ ಹಂತಗಳಲ್ಲಿ ತಮ್ನ ನ್ಯಾಯಬದ್ಧ ಹಕ್ಕನ್ನು ಪಡೆದುಕೊಳ್ಳಲು ಸಮರ್ಥಗೊಳಿಸುವುದಕ್ಕೆ ಸಂಪೂರ್ಣ ಬದ್ಧವಾಗಿದೆ ಎಂದು ರಾಜ್ಯಪಾಲ ತಾವರಚಂದ್ ಗೆಹ್ಲೋತ್ ಹೇಳಿದ್ದಾರೆ.

Advertisement

ದೇಶದ 73ನೇ ಗಣರಾಜ್ಯೋತ್ಸದ ಪ್ರಯುಕ್ತ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ನಾಡಿನ‌ ಜನತೆಯನ್ನುದ್ದೇಶಿಸಿ ಅವರು ಭಾಷಣ ಮಾಡಿದರು.

ಗಣರಾಜ್ಯೋತ್ಸವ ಉತ್ಸವ ಹಾಗೂ ಮಾನವೀಯ ಸಂದೇಶ ಒಳಗೊಂಡಿದೆ. ಸರ್ಕಾರವು ಕೋವಿಡ್ 19 ಸಮರ್ಥವಾಗಿ ಎದುರಿಸಿದೆ. ಸರ್ಕಾರದ ಕಾರ್ಯ ಪ್ರಶಂಸನೀಯವಾಗಿದೆ. ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಅತಿವೃಷ್ಟಿ, ಪ್ರವಾಹದ ಸಂದರ್ಭದಲ್ಲಿ ಸರ್ಕಾರ ಸಂತ್ರಸ್ತರ ನೆರವಿಗೆ ಧಾವಿಸಿದೆ. ಸರ್ಕಾರ ಕೃಷಿಗೆ ಒತ್ತು ನೀಡಿದೆ. 2021-22ನೇ ಸಾಲಿನಲ್ಲಿ 1,472 ಕೋಟಿ ರೂ. ಮೊತ್ತದ ಜಲಾನಯನ ಅಭಿವೃದ್ದಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 12.76.  ಲಕ್ಷ ರೈತರು ಬೆಳೆ ಸಮೀಕ್ಷೆಯಡಿ ನೋಂದಾಯಿಸಿಕೊಂಡಿದ್ದಾರೆ. ರೈತರ ಮಕ್ಕಳ ಶಿಕ್ಷಣ ಪ್ರೋತ್ಸಾಹ ಯೋಜನೆಯಡಿ 4.41 ಕೋಟಿ ರೂ. ಮೊತ್ತವನ್ನು 16 ಸಾವಿರ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಲಾಗಿದೆ ಎಂದರು.

ರಾಜ್ಯವು 2023 ರ ಆಗಸ್ಟ್ 15 ರವರೆಗೆ ಅಮೃತ ಮಹೋತ್ಸವ ಅನುಷ್ಠಾನಕ್ಕೆ ಮಾರ್ಗಸೂಚಿ ಸಿದ್ದಪಡಿಸಲಾಗಿದೆ. ಹಾಲು ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಇಡೀ ‌ದೇಶದಲ್ಲಿ 2ನೇ ಸ್ಥಾನ, ಮೊಟ್ಟೆ ಉತ್ಪಾದನೆಯಲ್ಲಿ 6ನೇ ಸ್ಥಾನ, ಮಾಂಸ ಉತ್ಪಾದನೆಯಲ್ಲಿ 10ನೇ‌ ಸ್ಥಾನ ಪಡೆದುಕೊಂಡಿದೆ. ಅತ್ಯಧಿಕ ಹುಲಿಗಳನ್ನು ಹೊಂದಿರುವ ದೇಶದ 2ನೇ ರಾಜ್ಯ, ಅತಿ ಹೆಚ್ಚು ಆನೆಗಳನ್ನು ಹೊಂದಿರುವ ಮೊದಲ ರಾಜ್ಯವಾಗಿದೆ ಎಂದರು.

“ನಾವೀಗ ಕೋವಿಡ್ ಮೂರನೇ ಅಲೆಯನ್ನು ಎದುರಿಸುತ್ತಿದ್ದೇವೆ. ನಾವು ಈ ಪರಿಸ್ಥಿತಿಯನ್ನು ಅತ್ಯಂತ ಗಂಭೀರವಾಗಿ ನಿಭಾಯಿಸಬೇಕು ಮತ್ತು ಇದರಲ್ಲಿ ನಾವು ಯಾವುದೇ ಅಲಕ್ಷ್ಯ ವಹಿಸುವುದು ಸರಿಯಲ್ಲ. ಸರ್ವರ ಆರೋಗ್ಯದ ಹಿತಕ್ಕಾಗಿ ಕಡ್ಡಾಯವಾಗಿ ದೈಹಿಕ ಅಂತರ ಕಾಪಾಡಬೇಕು, ಮಾಸ್ಕ್ ಧರಿಸಬೇಕು ಮತ್ತು ಸ್ಯಾನಿಟೈಸರ್ ಬಳಕೆ ಮಾಡಬೇಕು. ಈ ಮೂರು ಮಂತ್ರಗಳನ್ನು ನಿರಂತರವಾಗಿ ಪಾಲಿಸಬೇಕು ಎಂದು ರಾಜ್ಯಪಾಲರು ರಾಜ್ಯದ ಜನತೆಗೆ ಕರೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next