Advertisement

Governer ThawarChand: ಹೋರಾಟ ನೆಪದಲ್ಲಿ ಕಾಂಗ್ರೆಸ್‌ ಕಾನೂನು ಭಂಗ: ಅಶೋಕ್‌

01:30 AM Aug 20, 2024 | Team Udayavani |

ಬೆಂಗಳೂರು: ಮುಡಾ ಹಗರಣದಲ್ಲಿ ಸಾವಿರಾರು ಕೋಟಿ ಲೂಟಿ ಆಗಿದೆ. ವಾಲ್ಮೀಕಿ ನಿಗಮದಲ್ಲೂ 187 ಕೋಟಿಯ ಹಗರಣ ಆಗಿದೆ. ಸಿದ್ದರಾಮಯ್ಯ ಕುರ್ಚಿ ಬಿಡಬೇಕೆಂದು ಜನ ಬಯಸುತ್ತಿದ್ದಾರೆ. ಲೂಟಿಕೋರ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಕಿಡಿಕಾರಿದರು.

Advertisement

ಸರಕಾ ರದ ವಿರುದ್ಧ ಮೈತ್ರಿ ವಿಧಾನಸೌಧದಲ್ಲಿ ನಡೆಸಿದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ವತ್ಛತೆಯನ್ನು ವಿಧಾನಸಭೆಯಲ್ಲೇ  ಸ್ಪಷ್ಟಪಡಿಸದೆ ಓಡಿ ಹೋಗಿದ್ದೀರಿ. ಯಡಿಯೂರಪ್ಪ ಅವರಿಗೆ ಒಂದು ಕಾನೂನು, ನಿಮಗೊಂದು ಕಾನೂನೇ ಎಂದು ಪ್ರಶ್ನಿಸಿದರಲ್ಲದೆ, ಹೋರಾಟದ ಹೆಸರಿನಲ್ಲಿ ಕಾಂಗ್ರೆಸ್‌ ಕಾನೂನು-ಸುವ್ಯವಸ್ಥೆ ಹದಗೆಡಲು ಕಾರಣವಾಗುತ್ತಿದೆ. ಕಾಂಗ್ರೆಸ್ಸಿಗರು ಕಾನೂನನ್ನು ಕೈಗೆ ತೆಗೆದುಕೊಂಡಿದ್ದಾರೆ. ಕೂಡಲೇ ರಾಜ್ಯಪಾಲರ ಆಡಳಿತ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಭಂಡತನ ಬಿಡಿ, ರಾಜೀನಾಮೆ ಕೊಡಿ: ವಿಜಯೇಂದ್ರ ಆಗ್ರಹ

ಬೆಂಗಳೂರು: ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಕಾಂಗ್ರೆಸ್‌ ಸರಕಾರ ನಡೆಯುತ್ತಿದೆ. ಇಂತಹ ಭ್ರಷ್ಟ ಕಾಂಗ್ರೆಸ್‌, ಭ್ರಷ್ಟ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ- ಜೆಡಿಎಸ್‌ ನಿರಂತರ ಹೋರಾಟ ನಡೆಸುತ್ತಿವೆ. ಈ ಹೋರಾಟ ಇದೀಗ ತಾರ್ಕಿಕ ಅಂತ್ಯಕ್ಕೆ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಸರಕಾ ರದ ವಿರು ದ್ಧ ಮೈತ್ರಿ ವಿಧಾ ನ ಸೌ ಧ ದ ಲ್ಲಿ ನಡೆ ಸಿ ದ ಪ್ರತಿ ಭ ಟನೆಯ ನ್ನು ದ್ದೇ ಶಿಸಿ ಮಾತ ನಾ ಡಿದ ಅವರು, ಮೈಸೂರಿನ ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣಗಳು ಇದರಲ್ಲಿ ಪ್ರಮುಖವಾಗಿವೆ. ಮುಡಾದ 4ರಿಂದ 5 ಸಾವಿರ ಕೋಟಿಯ ನಿವೇಶನಗಳನ್ನು ನುಂಗಿ ಹಾಕಿದ್ದಾರೆ.

Advertisement

ಇದನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸುತ್ತಿದ್ದೇವೆ. ಭಂಡತನ ಬಿಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು. ಆದರೆ ಸಿದ್ದರಾಮಯ್ಯ ಗೂಂಡಾಗಿರಿಗೆ ಇಳಿದಿದ್ದಾರೆ. ಅವರ ಸಮಾಜವಾದದ ಮುಖವಾಡ ಕಳಚಿ ಬಿದ್ದಿದೆ. ರಾಜ್ಯಪಾಲರ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ಆಗ್ರಹ ಮಾಡಿದರು.

ಸಂವಿಧಾನದ ಹುದ್ದೆಯಾದ ರಾಜ್ಯಪಾಲರಿಗೆ ಅವಮಾನ ಮಾಡಿದರೆ ಅದು ಸಂವಿಧಾನಕ್ಕೆ ಮಾಡಿದ ಅವಮಾನ. ದಲಿತರನ್ನು ಸಿದ್ದರಾಮಯ್ಯನವರು ಸಂಪೂರ್ಣ ನಾಶ ಮಾಡಿದ್ದಾ ರೆ. ನಿಮ್ಮನ್ನು ನಂಬಿದ ದಲಿತರ ಚರ್ಮ ಸುಲಿದು ಚಪ್ಪಲಿ ಮಾಡಿದ್ದೀರಿ. ಕಾಗೆಯಲ್ಲಿ ಕಪ್ಪು ಚುಕ್ಕೆ ಹುಡುಕಲಾಗುತ್ತದೆಯೇ? -ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್‌ ವಿಪಕ್ಷ ನಾಯಕ

ರಾಜ್ಯಪಾಲರು ಕಾನೂನಾತ್ಮಕವಾಗಿ ನಡೆದುಕೊಂಡಿದ್ದಾರೆ . ಸಿದ್ದರಾಮಯ್ಯ ನಿಜವಾಗಿ ಸತ್ಯ ಹರಿಶ್ಚಂದ್ರ ಆಗಲು ಗೌರವದಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿದೆ. ಸಾರ್ವಜನಿಕರನ್ನು ತಪ್ಪು ದಾರಿಗೆ ಎಳೆಯದಿರಿ.
-ಡಿ.ವಿ. ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ

ನಿಮ್ಮ ಪಕ್ಷ, ಶಾಸಕರು, ಸಚಿವರು, ಕಾರ್ಯಕರ್ತರು ಜತೆಗಿದ್ದಾರೆ ಎಂದ ಮಾತ್ರಕ್ಕೆ ನ್ಯಾಯವೂ ನಿಮ್ಮ ಪರವಾಗಿ ಇರಬೇಕೆಂದೇನೂ ಇಲ್ಲ. ದಾಖಲೆಸಹಿತ ಸಿಕ್ಕಿ ಹಾಕಿಕೊಂಡಿದ್ದೀರಿ. ನೀವು ಮಾಡಿರುವ ಅನ್ಯಾಯ ಎಂದಿಗೂ ನ್ಯಾಯ ಆಗಲಾರದು. ರಾಜ್ಯಪಾಲರ ವಿರುದ್ಧ ಪ್ರತಿಭಟಿಸುವುದೂ ಅಲ್ಲದೆ, ಸಂವಿಧಾನಕ್ಕೂ ಕಾಂಗ್ರೆಸ್‌ ಅಪಚಾರ ಎಸಗುತ್ತಿದೆ.
– ಆರಗ ಜ್ಞಾನೇಂದ್ರ, ಮಾಜಿ ಸಚಿವ

ರಾಜ್ಯದ ಜನರು ಭ್ರಷ್ಟಾಚಾರದ ವಿರುದ್ಧ ಇದ್ದಾರೆ. ರೇಟ್‌ ಕಾರ್ಡ್‌ ಫಿಕ್ಸ್‌ ಮಾಡುವುದಕ್ಕಾಗಲೀ, ಭ್ರಷ್ಟಾಚಾರ ನಡೆಸುವುದಕ್ಕಾಗಲೀ
ಜನ ನಿಮಗೆ ಅಧಿಕಾರ ಕೊಟ್ಟಿಲ್ಲ. ಗ್ಯಾರಂಟಿ ಎಂಬುದು ನಿಮಗೆ ಭ್ರಷ್ಟಾಚಾರ ನಡೆಸಲು ಕೊಟ್ಟ ಲೈಸನ್ಸ್‌ ಅಲ್ಲ. ಲೂಟಿ ಹೊಡೆದರೆ ಕೇಳುವಂತಿಲ್ಲ ಎಂಬುದು ಸರಿಯಲ್ಲ. ನಿಮ್ಮ ಬ್ಲ್ಯಾಕ್‌ವೆುàಲ್‌ ರಾಜಕಾರಣ ಬಿಡಿ. ರಾಜೀನಾಮೆ ಕೊಡಿ. ತಪ್ಪು ಸಾಬೀತಾಗದಿದ್ದರೆ ಮತ್ತೆ ಸಿಎಂ ಆಗಿ.
– ಸಿ.ಟಿ. ರವಿ, ವಿಧಾನಪರಿಷತ್‌ ಸದಸ್ಯ

Advertisement

Udayavani is now on Telegram. Click here to join our channel and stay updated with the latest news.

Next