Advertisement

ಮಂಗಳೂರು, ಉಡುಪಿ ಪ್ರವಾಸದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

03:59 PM Mar 14, 2022 | Team Udayavani |

ಮಂಗಳೂರು : ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಅದರ ಅಂಗವಾಗಿ ಅವರು ಮಾ.14ರ‌‌ ಸೋಮಾವಾರ ಬೆಳಿಗ್ಗೆ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

Advertisement

ಈ ಸಂದರ್ಭದಲ್ಲಿ ಅವರಿಗೆ ಶಿಷ್ಟಾಚಾರದಂತೆ ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್ ಡಿಸಿಪಿ ಹರಿರಾಮ್ ಶಂಕರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಪಾಲರು ನಗರದ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಮೂಡಬಿದಿರೆಯ ಸಾವಿರ ಕಂಬದ ಬಸದಿ, ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ದರ್ಶನದ ಬಳಿಕ ಮತ್ತು ಕಾರ್ಕಳ ಉತ್ಸವದಲ್ಲಿ ಭಾಗಿಯಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next