Advertisement
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ “ಮೋದಿ ಅಟ್-20: ಡ್ರೀಮ್ಸ್ ಮೀಟ್ ಡೆಲಿವರಿ’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮೋದಿ ಬರುವ ಮೊದಲು ಹಲವಾರು ಸ್ಪಷ್ಟ ನೀತಿ ಇಲ್ಲದ ಕಾರಣ ಹಗರಣಗಳ ದೇಶ, ಕಠಿನ ನಿಲುವು ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಅರಾಜಕತೆ ಮೂಡಿತ್ತು, ಆದರೆ ಮೋದಿ ಆರ್ಥಿಕತೆ, ಸಾಮಾಜಿಕ ಬದಲಾವಣೆ ತಂದಿದ್ದಾರೆ. ಜನರ ಜೀವನ ಗುಣಮಟ್ಟ ಸುಧಾರಣೆ, ಕಾನೂನು ವ್ಯವಸ್ಥೆ, ಬಂದರು ಅಭಿವೃದ್ಧಿ, ಜನಸಾಮಾನ್ಯರಿಗೆ ಬೇಕಾದ ವ್ಯವಸ್ಥೆಯನ್ನು ಬದಲಾಯಿಸಿದ್ದಾರೆ ಎಂದು ಹೇಳಿದರು.
ಕೇಂದ್ರ ವಾರ್ತಾ ಮತ್ತು ಪ್ರಸಾರ ರಾಜ್ಯ ಖಾತೆ ಸಚಿವ ಎಲ್. ಮುರುಗನ್ ಮಾತನಾಡಿ, ಮೋದಿಯವರು ಪ್ರತಿ ಕ್ಷೇತ್ರದಲ್ಲಿಯೂ ಉತ್ತಮ ಆಡಳಿತ ನೀಡಿದ್ದಾರೆ. ದಲಿತರು, ಬುಡಕಟ್ಟು ಜನಾಂಗ, ಯುವಕರು, ಹೆಣ್ಣು ಮಕ್ಕಳ ಸಬಲೀಕರಣಗೊಳಿಸುವ ಯೋಜನೆಗಳನ್ನು ರೂಪಿಸಿದ್ದಾರೆ ಎಂದು ತಿಳಿಸಿದರು.
Related Articles
Advertisement
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮಾತನಾಡಿ, ಮೋದಿ ಅಟ್ 20- ಪುಸ್ತಕದಲ್ಲಿ “ದೆ ಆರ್ ಕಮ್ ವಿಂಡ್ಸ್ ಆಫ್ ಚೇಂಜ್’ ಎಂಬ ಅಂಕಣವಿದೆ. ಈ ಅಂಕಣವನ್ನು ಮೋದಿ ಕೂಡ ಇಷ್ಟಪಟ್ಟಿದ್ದಾರಂತೆ. ಸಾಮಾನ್ಯ ಜನರೊಂದಿಗೆ ಅವರು ಬೆರೆಯುವುದರಿಂದ ನನ್ನ ಅಂಕಣ ಇಷ್ಟವಾಗಿರಬಹುದು ಎಂದು ಹೇಳಿದರು.
ಸಚಿವರಾದ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಬಿ.ಸಿ. ಪಾಟೀಲ್, ವಿ. ಸೋಮಣ್ಣ, ವಿ. ಸುನೀಲ್‌ಕುಮಾರ್, ಶಾಸಕ ಉದಯ್ ಗರುಡಾಚಾರ್, ನಟಿ ತಾರಾ ಅನುರಾಧಾ ಹಾಗೂ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಉಪಸ್ಥಿತರಿದ್ದರು.
ಕಠಿನ ದಾರಿ ಸವೆಸಿದ ಮೋದಿ: ಗೆಹ್ಲೋಟ್ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಬಾಲ್ಯದಿಂದ ದೇಶದ ಪ್ರಧಾನಿಯಾಗುವರೆಗಿನ ಪ್ರಯಾಣವು ಕಷ್ಟಗಳುಮತ್ತು ಕಠಿನ ಪರಿಶ್ರಮದಿಂದ ಕೂಡಿದೆ. ಪ್ರತಿಯೊಬ್ಬ ವ್ಯಕ್ತಿಗೂ ಅವರ ವ್ಯಕ್ತಿತ್ವ ಮತ್ತು ಜೀವನ ಸ್ಫೂರ್ತಿದಾಯಕ ವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಪುಸ್ತಕದ ಮೂಲಕ ಮೋದಿ ಅವರು ರಾಷ್ಟ್ರದ ಏಕತೆ-ಸಮಗ್ರತೆ, ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರೀಯವಾದಿ ಚಿಂತನೆ ಯೊಂದಿಗೆ ಮಾಡಿದ ಕಾರ್ಯಗಳ ಮಾಹಿತಿ ದೊರೆಯಲಿದೆ. ದೇಶದ ಹಿತಾಸಕ್ತಿ, ಸಾರ್ವಜನಿಕ ಹಿತಾಸಕ್ತಿ ಜನರ ಚಿಂತನೆಯಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದರು.