ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.
Advertisement
ನಂತರ ಮಾತನಾಡಿದ ಅವರು, ಕರ್ನಾಟಕದ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು, ದೇವರು ಆರೋಗ್ಯ, ಆಯಸ್ಸು ಮತ್ತು ಶಾಂತಿಯನ್ನು ನೀಡಿ ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
ಇದನ್ನೂ ಓದಿ:ಕಂಗನಾ ರಣಾವುತ್ ಕೆನ್ನೆಗಿಂತ ನಯವಾದ ರಸ್ತೆ ಮಾಡುತ್ತೇವೆ: ಕಾಂಗ್ರೆಸ್ ಶಾಸಕ
ಕೋವಿಡ್ ಮಹಾಮಾರಿ ಹಾವಳಿ ಇರುವುದರಿಂದ ನಾಗರಿಕರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ, ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ರಾಜ್ಯಪಾಲರು ಕರೆ ನೀಡಿದರು.
Related Articles
Advertisement