ಮೈಸೂರು: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ಬಿಜೆಪಿ-ಜೆಡಿಎಸ್ ನಾಯಕರು ರಾಜ್ಯಪಾಲರನ್ನು ಏಜೆಂಟ್ ಆಗಿ ಬಳಸಿಕೊಳ್ಳುತ್ತಿದ್ದಾರೆ. ರಾಜ್ಯಪಾಲರು ಸಹ ಮೈತ್ರಿ ಪಕ್ಷಗಳ ನಾಯಕರಿಂದ ಸಲಹೆ ಪಡೆದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ವಿರುದ್ಧ ದೂರು ಸಲ್ಲಿಸಿದ್ದು, ರಾಜ್ಯಪಾಲರು ಕೂಡಲೇ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಮಾಹಿತಿ ಕೇಳಿದ್ದಾರೆ. ಅಬ್ರಹಾಂ ಸಲ್ಲಿಸಿರುವ 20 ಪುಟಗಳ
ದೂರು ರಾಜಭವನದಲ್ಲಿ ಬಿಜೆಪಿನಾಯಕರು ಕುಳಿತು ಸಿದ್ಧಪಡಿಸಿರು ವಂತಿದೆ ಎಂದರು.
ಸಿದ್ದರಾಮಯ್ಯಗೆ ತೊಂದರೆ ಕೊಡಲು ಕುಮಾರಸ್ವಾಮಿ, ವಿಜಯೇಂದ್ರ, ಅಶೋಕ್ ಮೊದಲಾ ದವರು ಸಂಚು ಮಾಡಿಲ್ಲವೆಂದು ಧರ್ಮಸ್ಥಳದ ಮಂಜುನಾಥನ ಮೇಲೆ ಆಣೆ ಮಾಡಲಿ ಎಂದು ಸವಾಲು ಹಾಕಿ ದರು.