Advertisement

ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಪಾಲರ ಪಾತ್ರ ಪ್ರಮುಖ

09:44 AM Nov 25, 2019 | Hari Prasad |

ಹೊಸದಿಲ್ಲಿ: ದೇಶದಲ್ಲಿ ಸಹಕಾರ ಒಕ್ಕೂಟ ವ್ಯವಸ್ಥೆಗೆ ಹೆಚ್ಚು ಪ್ರಾಧಾನ್ಯ ನೀಡುತ್ತಿರುವ ಹಿನ್ನೆಲೆ ಯಲ್ಲಿ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗವರ್ನರ್‌ಗಳ ಪಾತ್ರ ಪ್ರಮುಖವಾಗಿದೆ ಎಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಶನಿವಾರ ಆರಂಭ ವಾಗಿರುವ ರಾಜ್ಯಪಾಲರ ಮತ್ತು ಲೆಫ್ಟಿನೆಂಟ್‌ ಗವರ್ನರ್‌ಗಳ ಎರಡು ದಿನಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡುತ್ತಿದ್ದರು.

Advertisement

ರಾಜ್ಯಪಾಲರಾಗಿ ನೇಮಕಗೊಂಡಿರುವವರು ಸಾರ್ವಜನಿಕ ಜೀವನದಲ್ಲಿ ಹೆಚ್ಚಿನ ಅನುಭವ ಹೊಂದಿವರೇ ಆಗಿರುತ್ತಾರೆ. ಹೀಗಾಗಿ ಅವರ ಅನುಭವ ಸಾರ್ವಜನಿಕರಿಗೆ ಸಿಗಬೇಕು. ರಾಜ್ಯಪಾಲರು ಕೇವಲ ಸಾಂವಿಧಾನಿಕ ಕರ್ತವ್ಯಗಳನ್ನು ನಿರ್ವಹಿಸುವಲ್ಲಿಗೆ ಮಾತ್ರ ಸೀಮಿತವಾಗಬಾರದು. ಆಯಾ ರಾಜ್ಯಗಳಲ್ಲಿನ ಜನರ ಯೋಗಕ್ಷೇಮದತ್ತ ಗಮನ ನೀಡಬೇಕು ಎಂದರು. ದೇಶ ಸಹಕಾರ ಒಕ್ಕೂಟ ವ್ಯವಸ್ಥೆಗೆ ಆದ್ಯತೆ ನೀಡುತ್ತದೆ ಮತ್ತು ರಾಜ್ಯಗಳ ನಡುವೆ ಸ್ಪರ್ಧಾತ್ಮಕ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಅವರು ಕೊಡುಗೆ ನೀಡಬೇಕು ಎಂದರು.

ರಾಜ್ಯದ ಅಗತ್ಯಗಳಿಗೆ ಸ್ಪಂದಿಸಿ
ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್‌ ಗವರ್ನರ್‌ಗಳು ತಮ್ಮ ತಮ್ಮ ರಾಜ್ಯದ ಅಗತ್ಯಗಳಿಗೆ ಸ್ಪಂದಿಸಬೇಕು ಎಂದು ಸಲಹೆ ಮಾಡಿದರು. ಇದರ ಜತೆಗೆ ಅಲ್ಪಸಂಖ್ಯಾಕರು ಮತ್ತು ಎಸ್‌ಸಿ/ಎಸ್‌ಟಿ ವರ್ಗದವರ ಹಿತಾಸಕ್ತಿ ಕಾಪಾಡುವಲ್ಲಿ ಪ್ರಧಾನ ಪಾತ್ರ ವಹಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next