Advertisement
ಮಂಗಳವಾರ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಚರ್ಚಿಸುವಾಗ ರಾಜ್ಯ ಸರ್ಕಾರ ಯಾವುದೇ ಹೊಸ ಯೋಜನೆಗಳನ್ನು ಘೋಷಣೆ ಮಾಡಿಲ್ಲ ಎನ್ನು ವುದನ್ನು ಎತ್ತಿ ತೋರಿಸುವುದಕ್ಕೆ ಒತ್ತು ನೀಡುವಂತೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
Related Articles
Advertisement
ಪೊಲೀಸ್ ಇಲಾಖೆ ದುರ್ಬಳಕೆ, ಯು.ಟಿ.ಖಾದರ್ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿರುವುದು. ಬೀದರ್‌ನ ಶಾಹೀನ್ ಶಾಲೆಯ ಮೇಲ್ ಪ್ರಕರಣ ದಾಖಲಿಸಿರುವುದು, ಕಾನೂನು ಸುವ್ಯವಸ್ಥೆ ಹದ ಗೆಟ್ಟಿರುವುದು ಹಾಗೂ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಯುನಿಫಾರ್ಮ್ ಮೇಲೆ ಸದನ ಒಳಗೆ ಬರುವುದು ತಪ್ಪು. ಅವರಿಗೆ ಕಾನೂನು ಗೊತ್ತಿಲ್ಲ ಎಂದರೆ ಹೇಗೆ? ಈ ಬಗ್ಗೆ ಸಭಾಧ್ಯಕ್ಷರು ಗಮನ ಹರಿಸಬೇಕು.-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ ರಾಜ್ಯ ಸರ್ಕಾರ ಪ್ರತಿಪಕ್ಷಗಳನ್ನು ದಮನ ಮಾಡುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಶಾಸಕರ ಅನುದಾನ ಕಡಿತಗೊಳಿಸಲಾಗಿದೆ. ಪ್ರತಿಪಕ್ಷಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲಾಗುತ್ತಿದೆ. ಪ್ರತಿಭಟನೆಯ ಹಕ್ಕನ್ನೇ ಕಿತ್ತುಕೊಳ್ಳುತ್ತಿದ್ದಾರೆ. ಇದರ ವಿರುದ್ಧ ಧ್ವನಿ ಎತ್ತುತ್ತೇವೆ.
-ಈಶ್ವರ್ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ.