Advertisement

ಪರ್ಸೆಂಟೇಜ್ ಆರೋಪ ತನಿಖೆ ನಡೆಯಲಿದೆ : ಕಾರಜೋಳ ಪ್ರತಿಕ್ರಿಯೆ

07:36 PM Nov 29, 2021 | Team Udayavani |

ವಿಜಯಪುರ : ರಾಜ್ಯದಲ್ಲಿ ಸರ್ಕಾರಿ ಗುತ್ತಿಗೆ ಕೆಲಸ ಮಾಡಿದ ಹಣ ಪಾವತಿಯಲ್ಲಿ ಶೇ.40 ರಷ್ಟು ಪರ್ಸೆಂಟೇಜ್ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತನಖೆಗೆ ಆದೇಶಿಸಿದ್ದಾರೆ. ತನಿಖೆಯಿಂದ ಸತ್ಯ ಹೊರ ಬರಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದರು.

Advertisement

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರು ದೂರು ನೀಡಿದ್ದಾರೆ ಎಂಬ ಆರೋಪದಲ್ಲಿ ತನಿಖೆ ನಡೆಲಿದೆ. ಬಿಜೆಪಿ ಸರ್ಕಾರದ ಅವಧಿ ಮಾತ್ರವಲ್ಲ ಹಿಂದಿನ ಎಲ್ಲ ಸರ್ಕಾರಗಳ ಅವಧಿಯ ತನಿಖೆಯೂ ನಡೆಯಲಿ ಎಂದು ಆಗ್ರಹಿಸಿದರು.

ಕೃಷ್ಣಾ ನ್ಯಾಯಾಧೀಕರಣದ ಕುರಿತು ಇಂದು ಸುಪ್ರೀಂ ಕೋರ್ಟ್ ಮುಂದೆ ಬಂದಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ರಾಜ್ಯದಿಂದ ನಮ್ಮ ಕಾನೂನು ಪರಿಣಿತರು ಹಾಜರಾಗಿದ್ದರು. ಆದರೆ ಕೋರ್ಟ್ ಕಲಾಪವನ್ನು ಮುಂದೂಡಿದೆ. ಕೃಷ್ಣಾ ನ್ಯಾಯಾಧೀಕರಣದಲ್ಲಿ ಹಂಚಿಕೆಯಾಗಿರುವ ಕರ್ನಾಟಕದ ಪಾಲಿನ ನೀರನ್ನು ಪಡೆಯುವಲ್ಲಿ ರಾಜ್ಯ ಸರ್ಕಾರ ಕಟಿಬದ್ಧವಾಗಿದೆ ಎಂದರು.

ಇದನ್ನೂ ಓದಿ : ಡಿಸೆಂಬರ್‌ 13ರಂದು ಕೃಷ್ಣಾ ಜಲವಿವಾದ ವಿಚಾರಣೆಗೆ ಸುಪ್ರೀಂ ಸೂಚನೆ

Advertisement

Udayavani is now on Telegram. Click here to join our channel and stay updated with the latest news.

Next