ಬೆಳಗಾವಿ: ಮಹಾರಾಷ್ಟ್ರದಲ್ಲಿ ಇರುವುದು ಮೂರಾಬಟ್ಟೆ ಸರ್ಕಾರ. ಎನ್‍ಸಿಪಿ, ಕಾಂಗ್ರೆಸ್, ಶಿವಸೇನೆ ಸೇನೆ ಸೇರಿ ಅನೈತಿಕ ಸರ್ಕಾರ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಲೇವಡಿ ಮಾಡಿದರು.
ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಅಧಿಕಾರದ ಆಸೆಗೆ ಉದ್ಧವ್ ಠಾಕ್ರೆ ಕಾಂಗ್ರೆಸ್ ಜತಗೆ ಕೈಜೋಡಿಸಿದ್ದಾರೆ. ಹೀಗಾಗಿ ಉದ್ಧವ್ ಠಾಕ್ರೆ ವಿರುದ್ಧ ಅವರದೇ ಪಕ್ಷದ ಶಾಸಕರು ತಿರುಗಿಬಿದಿದ್ದಾರೆ ಎಂದರು.
ಈ ಹಿಂದೆ ಮುಂಬೈನಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಯುತ್ತಿತ್ತು. ಅದನ್ನು ತಡೆಯುವ ನಿಟ್ಟಿನಲ್ಲಿ ಬಾಳಾ ಸಾಹೇಬ ಠಾಕ್ರೆ ಶಿವಸೇನೆ ರಚನೆ ಮಾಡಿದ್ದರು. ಶಿವಸೇನೆ ಮತ್ತು ಕಾಂಗ್ರೆಸ್ ಎಂದಿಗೂ ಸೇರಲು ಆಗಲ್ಲ. ಕಾಂಗ್ರೆಸ್ ಪಕ್ಷಕ್ಕೆ ತತ್ವ ಸಿದ್ದಾಂತವಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ ಸ್ವಾಮೀಜಿ
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವ ಬಂದ ಪ್ರತಿಕ್ರಿಯಿಸಿದ ಅವರು ಸರಕಾರ ಮಾಡುವ ವಿಶ್ವಾಸ ಇದೆ. ಕಾದು ನೋಡಿ ಎಂದರು.