ಬೆಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿರುವ ಅಂತಾರಾಜ್ಯ ಜಲ ವ್ಯಾಜ್ಯಗಳ ಬಗ್ಗೆ ಇಂದು ಸಭೆ ಮಾಡುತ್ತಿದ್ದೇವೆ. ಜಲ ವಿವಾದ ಪ್ರಕರಣಗಳ ಬಗ್ಗೆ ಚರ್ಚಿಸಲಾಗುತ್ತದೆ. ಸುಪ್ರೀಂ ಕೋರ್ಟಿನಲ್ಲಿ ನಮ್ಮ ವಕೀಲರು ಸಮರ್ಥ ವಾದ ಮಂಡಿಸುತ್ತಿದ್ದಾರೆ. ವಕೀಲರು ವಿಳಂಬ ಮಾಡುತ್ತಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿಗಳ ಪೀಠ ಬದಲಾಗಿದೆ. ಜ. 25 ಕ್ಕೆ ಮೇಕೆದಾಟು ವಿಚಾರಣೆ ಇದೆ. ನಮ್ಮ ವಕೀಲರು ಸಮರ್ಥ ವಾದ ಮಂಡಿಸುತ್ತಿದ್ದಾರೆ ಎಂದರು.
ಸಿಎಂ ಪರಮಾಧಿಕಾರ: ಸಚಿವ ಸಂಪುಟ ಪುನಾರಚನೆ ಮಾಡುವುದು ಮುಖ್ಯಮಂತ್ರಿಗಳ ಅಧಿಕಾರ. ಹೈಕಮಾಂಡ್ ಜೊತೆ ಚರ್ಚೆ ನಡೆಸಿ ಯಾವಾಗ ಪುನಾರಚನೆ ಮಾಡಬೇಕು ಎಂದು ಅವರು ತೀರ್ಮಾನ ಮಾಡುತ್ತಾರೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ಇದನ್ನೂ ಓದಿ:ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ
ಒತ್ತಡ ತಂತ್ರ: ರಾಜ್ಯ ಬಿಜೆಪಿ ಪಾಳಯದಲ್ಲಿ ಸಂಪುಟ ಪುನಾರಚನೆ ಕೂಗು ಜೋರಾಗಿಯೇ ಕೇಳಿಬರುತ್ತಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರೇಣುಕಾಚಾರ್ಯ ಈ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಸಿಎಂ ಗೆ ಸಂಪುಟ ಪುನಾರಚನೆಗೆ ಒತ್ತಡ ಹೇರುತ್ತಿದ್ದಾರೆ.
ಆದರೆ ಸಿಎಂ ಮಾತ್ರ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗದ್ದಾರೆ ಎನ್ನಲಾಗಿದೆ. ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ಪಡೆಯುವ ಯೋಚನೆಯಲ್ಲಿ ಸಿಎಂ ಬೊಮ್ಮಾಯಿ ಇದ್ದಾರೆ ಎನ್ನುತ್ತಿವೆ ಮೂಲಗಳು.