Advertisement

ನಿಜಾಮುದ್ದೀನ್ ಪ್ರಾರ್ಥನೆಯಲ್ಲಿ ಭಾಗವಹಿಸಿದವರು ಕಡ್ಡಾಯವಾಗಿ ವೈದ್ಯಕೀಯ ತಪಾಸಣೆಗೊಳಗಾಗಿ

09:03 AM Apr 04, 2020 | keerthan |

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ವೈರಸ್ ಹೆಚ್ಚಾಗುತ್ತಿರುವ ಕಾರಣ ನಿಜಾಮುದ್ದೀನ್ ಧರ್ಮ ಸಭೆಯಲ್ಲಿ ಭಾಗವಹಿಸಿದವರು ಹಾಗೂ ಹೊರ ರಾಜ್ಯ ಮತ್ತು ಹೊರದೇಶಗಳಿಂದ ಬಂದಂತಹವರು ಕಡ್ಡಾಯವಾಗಿ ಸ್ವಯಂ ಪ್ರೇರಣೆಯಿಂದ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು ಎಂದು ಉಪಮುಖ್ಯಮಂತ್ರಿ ಶ್ರೀ ಗೋವಿಂದ ಎಂ ಕಾರಜೋಳ ಮನವಿ ಮಾಡಿದ್ದಾರೆ.

Advertisement

ಒಂದು ವೇಳೆ ಅಂತವರು ವೈದ್ಯಕೀಯ ತಪಾಸಣೆಗೊಳಗಾಗುವುದನ್ನು ನಿರ್ಲಕ್ಷಿಸಿದಲ್ಲಿ ತಮ್ಮ ಜೀವಕ್ಕೂ ಮತ್ತು ತಮ್ಮ ಬಂಧು ಬಳಗದವರ ಜೀವಕ್ಕೂ ತೊಂದರೆ ಮಾಡಿದಂತಾಗುತ್ತದೆ. ಅಲ್ಲದೇ ಸಮುದಾಯದ ಸ್ವಾಸ್ಥ್ಯವನ್ನು ಹಾಳು ಮಾಡಿದಂತಾಗುತ್ತದೆ. ಹಾಗಿ ಎಲ್ಲರೂ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು ಎಂದು ಹೇಳಿದರು.

ಒಂದು ವೇಳೆ ತಪ್ಪಿದಲ್ಲಿ ಅಂತಹವರಿಗೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಈಗಾಗಲೇ ಜಿಲ್ಲಾಡಳಿತಗಳಿಗೆ ಮತ್ತು ತಾಲೂಕು ಆಡಳಿತಗಳಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರುಸರ್ಕಾರ ಸೂಚಿಸಿರುವ ಎಲ್ಲಾ ನಿಯಮಗಳನ್ನು ಪಾಲಿಸಿ ಮನೆಯಲ್ಲೇ ಇದ್ದು ಸಹಕರಿಸಬೇಕು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next