Advertisement

Mudhol: ಮುಖ್ಯಮಂತ್ರಿ ಕುರ್ಚಿ ಮೇಲೆ‌ 5 ಜನ ಟವೆಲ್… ಸಂಸದ ಗೋವಿಂದ ಕಾರಜೋಳ ಬಾಂಬ್

07:06 PM Nov 30, 2024 | Team Udayavani |

ಮುಧೋಳ: ರಾಜ್ಯದಲ್ಲಿ ಮುಖ್ಯಮಂತ್ರಿಯಾಗಬೇಕು ಎಂದು 5 ಜನ ಟವೆಲ್ ಹಾಕಿಕೊಂಡು ಕುಳಿತಿದ್ದಾರೆ‌ ಎಂದು ಸಂಸದ ಗೋವಿಂದ ಕಾರಜೋಳ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ, ಶಾಮನೂರ ಶಿವಶಂಕರಪ್ಪ, ಡಾ.ಜಿ. ಪರಮೇಶ್ವರ, ಕೆ.ಎಚ್.ಮುನಿಯಪ್ಪ ಹಾಗೂ ಎಂ.ಬಿ ಪಾಟೀಲ ಮುಖ್ಯಮಂತ್ರಿ ರೇಸ್ ನಲ್ಲಿದ್ದಾರೆ. ಪಕ್ಷದಲ್ಲಿ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳಲು ಶಾಸಕರ ಖರೀದಿಗೆ ಬಿಡ್ ರೀತಿಯಲ್ಲಿ‌ ದರ ಏರಿಕೆ‌ ಪೈಪೋಟಿ‌ ನಡೆಸಿದ್ದಾರೆ‌. ಇದೇ ಕಾರಣಕ್ಕೆ ಸಿಎಂ ಹಾಗೂ ಡಿಸಿಎಂ ಅವರನ್ನು ದೆಹಲಿಗೆ ಕರೆಸಿ ರಾಜೀನಾಮೆಗೆ ರೆಡಿಯಾಗಿ ಎಂಬ ಸೂಚನೆಯನ್ನು ಕಾಂಗ್ರೆಸ್ ಹೈ ಕಮಾಂಡ್ ನೀಡಿದೆ ಎಂದು ಅವರು ವ್ಯಾಖ್ಯಾನಿಸಿದ್ದಾರೆ.

ಸಿದ್ದರಾಮಯ್ಯನವರು ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಸರ್ಕಾರದ ಖಜಾನೆ ಹಗಲು ದರೋಡೆಯಾಗುತ್ತಿದೆ. ಈ ಕಾರಣಕ್ಕಾಗಿ ಸಿಎಂ ಹತಾಶರಾಗಿ ದ್ವೇಷ ರಾಜಕಾರಣ ಮಾಡಲು ಶುರು ಮಾಡಿದ್ದಾರೆ ಎಂದು ಆರೋಪಿಸಿದರು.

ಶಾಸಕರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ದಿ ಮಾಡಲು ಸಾಧಗಯವಾಗುತ್ತಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ. ಕೆಲವೆ ದಿನಗಳಲ್ಲಿ‌ ಸರ್ಕಾರ ಬದಲಾಗಲಿದೆ ಎಂದು ಗೋವಿಂದ ಕಾರಜೋಳ ಭವಿಷ್ಯ ನುಡಿದರು.

ಇದನ್ನೂ ಓದಿ: PM Modi ವಯನಾಡ್ ಭೂಕುಸಿತ ಸಂತ್ರಸ್ತರ ವಿರುದ್ಧ ತಾರತಮ್ಯ ತೋರಿದ್ದಾರೆ: ರಾಹುಲ್

Advertisement
Advertisement

Udayavani is now on Telegram. Click here to join our channel and stay updated with the latest news.

Next