Advertisement
ಕರ್ನಾಟಕ ಸರ್ಕಾರವು ಗೋರಕ್ಷಕ ರನ್ನು ರಕ್ಷಿಸುವ ಕಾನೂನನ್ನು ಸಮರ್ಥಿಸಿಕೊಂಡಿದೆ ಎನ್ನುವ ಅರ್ಥದಲ್ಲಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿ ರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಬಾರದು ಎಂಬ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಿರುವ ರಾಜ್ಯ ಸರ್ಕಾರ, ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸ ಲಾಗಿರುವ ಕೌಂಟರ್ ಅಫಿಡವಿಟ್‌ನಲ್ಲಿ ಹೇಳಲಾಗಿರುವ ಅಂಶಗಳನ್ನು ಉದ್ಧರಿಸಿ ಪತ್ರಿಕಾ ಪ್ರಕಟಣೆ ಬಿಡುಗಡೆಗೊಳಿಸಿದೆ. ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿ ರುವ ಸಾರ್ವಜನಿಕ ಹಿತಾಸಕ್ತಿ ದಾವೆಯೊಂದರಲ್ಲಿ ಗೋವಿನ ರಕ್ಷಣೆಯ ಹೆಸರಲ್ಲಿ ಹಿಂಸೆಯನ್ನು ಮಾಡುವ ಗುಂಪುಗಳನ್ನು ನಿಷೇಧಿಸಬೇಕು ಎಂಬುದಾಗಿ ಕೋರಲಾಗಿತ್ತು. ಇದೇ ವೇಳೆ, ಕರ್ನಾಟಕ ಗೋವಧೆ ತಡೆ ಹಾಗೂ ಜಾನುವಾರ ಸಂರಕ್ಷಣಾ ಕಾಯ್ದೆ 1964ರ ಪರಿಚ್ಛೇಧ 15 ಅಸಂವಿಧಾನಿಕ ಎಂದು ಪರಿಗಣಿಸುವಂತೆಯೂ ಕೋರಲಾಗಿತ್ತು. ಈ ಸಂಬಂಧ ಕರ್ನಾಟಕ ಸರ್ಕಾರವು ನ್ಯಾಯಾಲಯದ ನಿರ್ದೇಶನದಂತೆ ಕೌಂಟರ್ ಅಫಡವಿಟ್ ಸಲ್ಲಿಸಿದೆ.
Advertisement
ಗೋರಕ್ಷಕ ಕಾಯ್ದೆ: ರಾಜ್ಯ ಸರ್ಕಾರದ ಸ್ಪಷ್ಟನೆ
10:56 AM May 05, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.