Advertisement

ಮತ್ತೆ ಬದಲಾಯ್ತು ಬೇಸಿಗೆ ರಜೆ; ಬೇಗನೇ ಶಾಲೆ ಆರಂಭಿಸಲು ಸರ್ಕಾರದ ನಿರ್ಧಾರ: ಎಂದಿನಿಂದ ಆರಂಭ?

09:21 AM Feb 24, 2022 | Team Udayavani |

ಬೆಂಗಳೂರು: ಈ ಹಿಂದೆ ಶಾಲಾ ಶೈಕ್ಷಣಿಕ ವರ್ಷವು ಮೇ.29ರಿಂದ ಆರಂಭವಾಗಿ ಎಪ್ರಿಲ್ 10ಕ್ಕೆ ಮುಕ್ತಾಯವಾಗುತ್ತಿತ್ತು. ಆದರೆ ಈ ಬಾರಿ ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಬೇಗವೇ ಶಾಲೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ಮೇ.16ರಿಂದ 2022-23ರ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

Advertisement

ಹೀಗಾಗಿ ಈ ಬಾರಿ ಎಪ್ರಿಲ್ 10ರಿಂದ ಮೇ.15ರವರೆಗೆ ಬೇಸಿಗೆ ರಜೆ ನೀಡಲು ಸರ್ಕಾರ ನಿರ್ಧರಿಸಿದೆ. ಮುಂದಿನ ಶೈಕ್ಷಣಿಕ ವರ್ಷ ಮೇ.16ರಿಂದ ಆರಂಭವಾಗಲಿದೆ.

ಕೋವಿಡ್ ಕಾರಣದಿಂದ ನಿರಂತರವಾಗಿ ಭೌತಿಕ ತರಗತಿಗಳು ನಡೆಯದೆ, ಆನ್ ಲೈನ್ ಶಿಕ್ಷಣ ಪರಿಣಾಮಕಾರಿಯಾಗಿಲ್ಲ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಹೀಗಾಗಿ ಈ ಕಲಿಕಾ ಹಿನ್ನಡೆಯನ್ನು ಸರಿದೂಗಿಸಲು ‘ಕಲಿಕಾ ಚೇತರಿಕಾ ಕಾರ್ಯಕ್ರಮ”ವನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಜಪ್ತಿ ಮಾಡಿದ ಸಂಸ್ಥೆಯೇ ತೆರಿಗೆ ಕಟ್ಟಬೇಕು; ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Advertisement

Advertisement

Udayavani is now on Telegram. Click here to join our channel and stay updated with the latest news.

Next