Advertisement

ಚಾ.ನಗರ ದುರಂತ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ: ನಿವೃತ್ತ ನ್ಯಾ. ಬಿ.ಎ ಪಾಟೀಲ್ ನೇಮಕ

05:29 PM May 05, 2021 | Team Udayavani |

ಬೆಂಗಳೂರು: ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿ ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.

Advertisement

ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವ ಏಕಸದಸ್ಯ ಆಯೋಗವನ್ನು ನೇಮಕ ಮಾಡಿದೆ.

ಇದನ್ನೂ ಓದಿ:ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಷಿಜನ್ ರಾಜ್ಯದ ಬಳಕೆಗೆ ಇರಲಿ: ಸಿದ್ದರಾಮಯ್ಯ ಆಗ್ರಹ

ಮೇ 3ರಂದು ಚಾಮರಾಜನಗರದ ಕೋವಿಡ್  ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿತ್ತು. ಆಸ್ಪತ್ರೆಯಲ್ಲಿ 23 ಮಂದಿ ರೋಗಿಗಳು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು..

ಆಕ್ಸಿಜನ್ ಪೂರೈಕೆ ಕುರಿತಂತೆ ಚಾಮರಾಜನಗರ ಆಸ್ಪತ್ರೆ, ಜಿಲ್ಲಾಧಿಕಾರಿ ಕಚೇರಿ ಮತ್ತು ಮೈಸೂರ ಜಿಲ್ಲಾಧಿಕಾರಿ ಕಚೇರಿಯ ಎಲ್ಲಾ ದಾಖಲೆಗಳನ್ನು  ಸೀಜ್ ಮಾಡಿ ತನಿಖಾಧಿಕಾರಿಗೆ ನೀಡಬೇಕೆಂದು ಹೈಕೋರ್ಟ್ ಇಂದು ಆದೇಶಿಸಿದೆ.

Advertisement

ಇದನ್ನೂ ಓದಿ: ಮೈಸೂರು-ಚಾ.ನಗರ ಡಿಸಿ ಕಚೇರಿ, ಆಸ್ಪತ್ರೆಯ ಎಲ್ಲಾ ದಾಖಲೆಗಳನ್ನು ಸೀಜ್ ಮಾಡಲು ಹೈಕೋರ್ಟ್ ಆದೇಶ

Advertisement

Udayavani is now on Telegram. Click here to join our channel and stay updated with the latest news.

Next