ಬೆಂಗಳೂರು: ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಬೆಳಗಾವಿ, ಬಾಗಲಕೋಟೆ, ಬೀದರ್, ಕೋಲಾರ, ಕಲಬುರಗಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಲಾಗಿದೆ.
ಇದನ್ನೂ ಓದಿ:ಮಸ್ಕಿಯಲ್ಲಿ ಬಿಜೆಪಿ ‘ಪ್ರತಾಪ’ವಿಲ್ಲ : ಸೋಲಿನ ಬಗ್ಗೆ ಟ್ವೀಟ್ ಮಾಡಿದ ವಿಜಯೇಂದ್ರ
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಬೆಳಗಾವಿ ಜಿಲ್ಲೆ, ಉಮೇಶ್ ಕತ್ತಿ ಅವರಿಗೆ ಬಾಗಲಕೋಟೆ, ಅರವಿಂದ ಲಿಂಬಾವಳಿ ಅವರಿಗೆ ಬೀದರ್, ಎಂ.ಟಿ.ಬಿ ನಾಗರಾಜ್ ಅವರಿಗೆ ಕೋಲಾರ, ಮುರುಗೇಶ್ ನಿರಾಣಿ ಅವರಿಗೆ ಕಲಬುರಗಿ ಮತ್ತು ಎಸ್.ಅಂಗಾರ ಅವರಿಗೆ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವರ ಸ್ಥಾನ ನೀಡಿದೆ.
ಇದನ್ನೂ ಓದಿ:ದ್ರಾವಿಡ ನಾಡಿನಲ್ಲಿ ಸ್ಟಾಲಿನ್ ಓಟ ಜೋರು: ಸಿಎಂ ಆಗಿ ಅಧಿಕಾರ ಸ್ವೀಕರಿಸಲು ಮುಹೂರ್ತ ಫಿಕ್ಸ್