ದೇವನಹಳ್ಳಿ: ಮಹಾಮಾರಿ ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆ, ಸತತ ಎರಡು ವರ್ಷಗಳಿಂದ ವಿದ್ಯಾರ್ಥಿಗಳ ವಾರ್ಷಿಕ ಶೈಕ್ಷಣಿಕ ಪ್ರವಾಸಕ್ಕೆ ಬ್ರೇಕ್ ಹಾಕಿದ್ದ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆ ಈಗ ಹಲವು ಷರತ್ತು ವಿಧಿಸುವ ಮೂಲಕ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಪ್ರಸ್ತುತ ಸಾಲಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ವಾರ್ಷಿಕ ಶೈಕ್ಷಣಿಕ ಪ್ರವಾಸಕ್ಕೆ ಹಲವು ಕಟ್ಟುನಿಟ್ಟಿನ ಸೂಚನೆ ನೀಡುವ ಮೂಲಕ ಅನುಮತಿ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ಪ್ರಮುಖವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯು ಕ್ತರು, ಡಿಸೆಂಬರ್ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಪೂರ್ಣಗೊಳಿಸಬೇಕೆಂದು ಸೂಚಿಸಿದ್ದು, ಡಿಸೆಂಬರ್ ನಂತರ ಪ್ರವಾಸಕ್ಕೆ ಅನುಮತಿ ನೀಡದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಡ್ಡಾಯವಾಗಿ ಸೂಚಿಸಿದೆ.
ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿರಲಿ: ಮಕ್ಕಳನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದುಕೊಂಡು ಹೋಗಲು ಪೋಷ ಕರ ಒಪ್ಪಿಗೆ ಕಡ್ಡಾಯವಾಗಿದ್ದು, ಶೈಕ್ಷಣಿಕ ಪ್ರವಾಸ ಆಗಿರುವುದರಿಂದ ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾಗಿ ಇರುವ ಸ್ಥಳಗಳನ್ನು ಮಾತ್ರ ಪ್ರವಾಸಕ್ಕೆ ಆಯ್ಕೆ ಮಾಡಿ ಕೊಳ್ಳುವಂತೆ ಸುತ್ತೋಲೆಯಲ್ಲಿ ಸೂಚಿಸಿದೆ. ಪ್ರವಾ ಸಕ್ಕೆ ಕೈಗೊಳ್ಳುವ ಖಾಸಗಿ ಶಿಕ್ಷಣ ಸಂಸ್ಥೆಗಳು ಕಡ್ಡಾಯ ವಾಗಿ ಪ್ರಸ್ತುತ ವರ್ಷದಲ್ಲಿ ಮಾನ್ಯತೆಯನ್ನು ನವೀಕರಿಸಿರಬೇಕು. ಶನಿವಾರ, ಭಾನುವಾರ ತರಗತಿಗಳನ್ನು ನಡೆಸಿ ಕೊರತೆ ಬೀಳುವ ಪಠ್ಯಗಳನ್ನು ಬೋಧಿಸಬೇಕೆಂದು ಸೂಚಿಸಲಾಗಿದೆ.
ಶಾಲಾ ಮುಖ್ಯಸ್ಥರೇ ನೇರ ಹೊಣೆ: ಶಾಲಾ ಪ್ರವಾಸ ಸಂದರ್ಭದಲ್ಲಿ ಸಂಭವಿಸುವ ಎಲ್ಲ ರೀತಿಯ ಅವಘ ಡಗಳಿಗೆ ಶಾಲಾ ಮುಖ್ಯ ಶಿಕ್ಷಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಶಿಕ್ಷಣ ಇಲಾಖೆ ಆಯುಕ್ತರು ಖಡಕ್ ಆಗಿ ಸೂಚಿಸಿದ್ದಾರೆ. ಕಡ್ಡಾಯವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಅಥವಾ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ವಾಹನಗಳಲ್ಲಿ ಮಾತ್ರ ಪ್ರವಾಸ ಕೈಗೊಳ್ಳಬೇಕಿದ್ದು, ಯಾವುದೇ ಕಾರಣಕ್ಕೂ ಖಾಸಗಿ ಅಥವಾ ಮಿನಿ ಬಸ್ ಮತ್ತಿತರ ವಾಹನ ಗಳನ್ನು ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಕೈಗೊಳ್ಳಬಾರದೆಂದು ಮುಖ್ಯ ಶಿಕ್ಷಕರಿಗೆ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ. ಪ್ರವಾಸ ಕೈಗೊಳ್ಳುವ ವಿದ್ಯಾರ್ಥಿನಿಯರ ಮೇಲ್ವಿಚಾರಣೆಗೆ ಮಹಿಳಾ ಶಿಕ್ಷಕರೇ ನೋಡಿಕೊಳ್ಳಬೇಕಿದೆ.
ಕೋವಿಡ್ ನಂತರ ಸರ್ಕಾರವು ಮಕ್ಕಳ ಪ್ರವಾಸಕ್ಕೆ ಅನುಮತಿ ನೀಡಿದೆ. ಆಡಳಿತ ಮಂಡಳಿ ಯಾವ ಕಡೆ ಮಕ್ಕಳನ್ನು ಕರೆದುಕೊಂಡು ಹೋಗಬೇಕು ಎಂಬುವುದರ ಬಗ್ಗೆ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿರುತ್ತದೆ. ಸರ್ಕಾರಿ ಬಸ್‌ಗಳನ್ನೇ ಬಳಸಬೇಕು. ಇತಿಹಾಸ ಇರುವ ಕಡೆ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಬೇಕು.
– ಶ್ರೀಕಂಠ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ