ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢ ಶಾಲೆ ಸೇರಿದಂತೆ ಎಲ್ಲಾ ಶಾಲೆ ಕಾಲೇಜುಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಿದಲು ಸರ್ಕಾರ ಹಸಿರು ನಿಶಾನೆ ತೋರಿದೆ. ನವೆಂಬರ್ 8ರಿಂದ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭಿಸಲು ಸೂಚಿಸಲಾಗಿದ್ದು, ಅಂದಿನಿಂದಲೇ ಪೂರ್ವ ಪ್ರಾಥಮಿಕ ತರಗತಿಗಳಾದ ಯುಕೆಜಿ ಮತ್ತು ಎಲ್ ಕೆಜಿ ಶಾಲೆಗಳನ್ನು ತೆರೆಯಲು ಸರ್ಕಾರ ಸೂಚನೆ ನೀಡಿದೆ.
ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದ್ದು, ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ತೆರೆಯಬೇಕು. ಬೆಳಗ್ಗೆ 9.30ರಿಂದ ಮಧ್ಯಾಹ್ನ 3.30ರವೆರೆಗೆ ತರಗತಿ ನಡೆಸಲು ಸೂಚಿಸಿದೆ.
ಇದನ್ನೂ ಓದಿ:ಮತ ಎಣಿಕೆಯ ದಿನ ಗೋವಾದ ಜನರಿಗೆ ನಿಜವಾದ ದೀಪಾವಳಿ: ಚೋಡಣಕರ್
ಕೋವಿಡ್ 19 ಸೋಂಕಿನ ಪ್ರಮಾಣ 2%ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ಇದು ಅನ್ವಯವಾಗುತ್ತದೆ.
ಪೂರ್ವ ಪ್ರಾಥಮಿಕ ಮಕ್ಕಳಿಗೆ ಮನೆಯಿಂದಲೇ ಉಪಹಾರ ಮತ್ತು ಕುಡಿಯುವ ನೀರನ್ನು ಕಳುಹಿಸುವಂತೆ ಎಲ್ಲಾ ಪೋಷಕರಿಗೆ ತಿಳಿಸಬೇಕು ಎಂದು ಸೂಚಿಸಲಾಗಿದೆ.