Advertisement

ಅತೃಪ್ತರು ವಾಪಸ್‌ ಬಂದರೆ ಮಾತ್ರ ಸರ್ಕಾರ ಬಚಾವ್‌’

12:56 AM Jul 12, 2019 | Team Udayavani |

ಗದಗ: ಅತೃಪ್ತರು ವಾಪಸ್‌ ಬಂದರೆ ಮಾತ್ರ ಸರ್ಕಾರ ಉಳಿಯುತ್ತದೆ. ಆದರೆ, ಅವರು ಯಾವ ಷರತ್ತುಗಳನ್ನು ವಿಧಿಸುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ಕಾಂಗ್ರೆಸ್‌ ಹಿರಿಯ
ನಾಯಕ ಎಚ್‌.ಕೆ.ಪಾಟೀಲ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯ ಬೆಳವಣಿಗೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ
ಅಮಿತ್‌ ಶಾ ನಡೆಸಿರುವ ಕುದುರೆ ವ್ಯಾಪಾರವೇ ಕಾರಣ.

ಸ್ಥಿರವಾಗಿರುವ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ಮೇಲಿಂದ ಮೇಲೆ ನಡೆಯುತ್ತಿವೆ. ಈ ಬಾರಿ ಕಾಂಗ್ರೆಸ್‌-ಜೆಡಿಎಸ್‌ ಶಾಸಕರಿಂದ ರಾಜೀನಾಮೆ ಕೊಡಿಸುವ ಮೂಲಕ ಬಿಜೆಪಿ ಕುದುರೆ ವ್ಯಾಪಾರ ನಡೆಸುತ್ತಿದೆ. ಈ ಹಿಂದೆ ನಡೆಸಿದ ಪ್ರಯತ್ನದಲ್ಲಿ ಬಿಜೆಪಿ ನಾಯಕರು ಯಶಸ್ವಿಯಾಗಿಲ್ಲ. ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಈ ಬಾರಿಯೂ ಬಿಜೆಪಿಯವರು ವಿಫಲರಾಗಬೇಕು ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next