Advertisement

ವ್ಯಾಪಕ ವಿರೋಧ: ವಕ್ಫ್ ಸಲಹಾ ಸಮಿತಿಗೆ ಜಮಾಲ್ ಆಜಾದ್ ನೇಮಕ ಆದೇಶಕ್ಕೆ ಸರಕಾರ ತಡೆ

05:23 PM Aug 12, 2022 | Team Udayavani |

ಹೊನ್ನಾವರ : ಉತ್ತರಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಗೆ ಜಮಾಲ್ ಆಜಾದ್ ಸಯ್ಯದ್ ಅಣ್ಣಿಗೇರಿ ನೇಮಕ ಆದೇಶಕ್ಕೆ ಸರಕಾರ ತಡೆ ಹಿಡಿದಿದೆ.

Advertisement

ಪರೇಶ್ ಮೇಸ್ತಾ ಕೊಲೆ ಆರೋಪ ಹೊತ್ತಿದ್ದ ಅಣ್ಣಿಗೇರಿ ವಿರುದ್ಧ ಭಾರಿ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಆದೇಶವನ್ನು ಸರಕಾರ ತತ್ ಕ್ಷಣ ತಡೆ ಹಿಡಿದಿದೆ.

ಬಿಜೆಪಿ ಕಾರ್ಯಕರ್ತರು ಸೇರಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಆಜಾದ್ ನೇಮಕಕ್ಕೆ ವ್ಯಾಪಕ ವಿರೋಧ ವ್ಯಕ್ತ ಪಡಿಸಿದ್ದರು.

ಸಿದ್ದರಾಮಯ್ಯ ಆಕ್ರೋಶ

ಪರೇಶ್ ಮೇಸ್ತ ಕೊಲೆಯ ಆರೋಪಿಯನ್ನು ವಕ್ಫ್ ಬೋರ್ಡ್ ಉಪಾಧ್ಯಕ್ಷನನ್ನಾಗಿ ಮಾಡ ಹೊರಟಿರುವುದು ಅಕ್ಷಮ್ಯ ಎಂದು ವಿಧಾನಸಭೆ ವಿಪಕ್ಷ ನಾಯಕ‌ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಚುನಾವಣೆಗಳು ಹತ್ತಿರ ಬಂದಾಗಲೆಲ್ಲ ಇದ್ದಕ್ಕಿದ್ದಂತೆ ಅಮಾಯಕರ ಕೊಲೆಗಳು ನಡೆಯುತ್ತವೆ. ಬಿಜೆಪಿ ಸರ್ಕಾರಗಳು ಬಿಕ್ಕಟ್ಟಿಗೆ ಸಿಲುಕಿಕೊಂಡಾಗಲೆಲ್ಲ ಅಹಿತಕರ ಘಟನೆಗಳು ನಡೆಯುತ್ತವೆ. ಸಂಘ ಪರಿವಾರದ ಮಾಜಿ ಮುಖಂಡರಾಗಿದ್ದ ಮಹೇಂದ್ರಕುಮಾರ್ ಅವರು ಬಿಜೆಪಿಯ ಕುರಿತು,ಸಂಘ ಪರಿವಾರದ ಕುರಿತು ಹಲವಾರು ಭಯಾನಕ ಸಂಗತಿಗಳನ್ನು ಸಮಾಜದ ಮುಂದೆ ಇಟ್ಟಿದ್ದರು. ನಾಡಿನ ಜನರು ಈ ಕುರಿತು ಗಂಭೀರವಾಗಿ ಚಿಂತಿಸಬೇಕಾಗಿದೆ. ಇತ್ತೀಚೆಗೆ ಕೊಲೆಗಳ ಹಿಂದಿನ ರಹಸ್ಯಗಳು ಒಂದೊಂದಾಗಿ ಹೊರಗೆ ಬರುತ್ತಿವೆ. ಹೊನ್ನಾವರದಲ್ಲಿ 2017ರಲ್ಲಿ ನಡೆದಿದ್ದ ಪರೇಶ್ ಮೇಸ್ತ ಕೊಲೆಯ ಪ್ರಮುಖ ಮತ್ತು ಮೊದಲ ಆರೋಪಿ ಆಜಾದ್ ಅಣ್ಣಿಗೇರಿಯನ್ನು ರಾಜ್ಯ ಸರ್ಕಾರ ವಕ್ಫ್ ಬೋರ್ಡ್ ಉಪಾಧ್ಯಕ್ಷನನ್ನಾಗಿ ನೇಮಕ ಮಾಡಿರುವುದು ಗಂಭೀರವಾದ ಅನುಮಾನಗಳನ್ನು ಸೃಷ್ಟಿಸಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next