Advertisement

664 ವಿದ್ಯಾರ್ಥಿಗಳ ಸಿಇಟಿ ರ್‍ಯಾಂಕಿಂಗ್‌ ಹಿಂಪಡೆದ ಕೆಇಎ

11:08 PM Aug 03, 2022 | Team Udayavani |

ಬೆಂಗಳೂರು: ಪುನರಾವರ್ತಿತ ಅಭ್ಯರ್ಥಿಗಳಾಗಿ ಸಿಇಟಿ ಪರೀಕ್ಷೆ ಬರೆದಿದ್ದ 664 ಮಂದಿ ಸಿಬಿಎಸ್‌ಇ ಹಾಗೂ ಐಸಿಎಸ್‌ಇ ವಿದ್ಯಾರ್ಥಿಗಳ ರ್‍ಯಾಂಕಿಂಗ್‌ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಿಂಪಡೆದಿದ್ದು, ಇವರಿಗೆ 12ನೇ ತರಗತಿ ಫ‌ಲಿತಾಂಶವನ್ನು ಪರಿಗಣಿಸದೆ ಕೇವಲ ಸಿಇಟಿ ಫ‌ಲಿತಾಂಶದ ಆಧಾರದಲ್ಲೇ ರ್‍ಯಾಂಕಿಂಗ್‌ ನೀಡಲು ನಿರ್ಧರಿಸಲಾಗಿದೆ. ಇದನ್ನು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಅವರು ಸಮರ್ಥಿಸಿಕೊಂಡಿದ್ದಾರೆ.

Advertisement

2021ನೇ ಸಾಲಿನ ಸಿಇಟಿ ಪುನರಾವರ್ತಿತ ಒಟ್ಟು 24 ಸಾವಿರ ವಿದ್ಯಾರ್ಥಿ ಗಳಿಗೆ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸುವುದು ಸಾಧ್ಯವಿಲ್ಲ. ಈ ವಿಷಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ಈ ಕುರಿತು ಮಂಗಳವಾರ ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್‌ ಸಹಿತ ಇತರ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಒಂದು ವೇಳೆ ಈ ವಿದ್ಯಾರ್ಥಿಗಳಿಗೆ ಪಿಯುಸಿ ಅಂಕಗಳನ್ನು ಪರಿಗಣಿಸಿ ರ್‍ಯಾಂಕ್‌ ನೀಡಿದರೆ ಒಟ್ಟಾರೆ 3 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಇವರಲ್ಲಿ ಒಂದೂವರೆ ಲಕ್ಷ ವಿದ್ಯಾರ್ಥಿಗಳು ಕಳೆದ ವರ್ಷವೇ ಸಿಇಟಿ ಬರೆದಿರುವವರು ಹಾಗೂ ಈ ವರ್ಷದ ಒಂದೂವರೆ ಲಕ್ಷ ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ವಿವರಿಸಿದರು.

ಕಳೆದ ವರ್ಷದ ಐಸಿಎಸ್‌ಇ ಪಠ್ಯ ಕ್ರಮದ 64 ಮತ್ತು ಸಿಬಿಎಸ್‌ಇ ಪಠ್ಯ ಕ್ರಮದ 600 ವಿದ್ಯಾರ್ಥಿಗಳು ಕೂಡ ಈ ಬಾರಿ ಸಿಇಟಿ ಬರೆದಿದ್ದು, ಅವರಿಗೂ ಕೇವಲ ಸಿಇಟಿ ಅಂಕದ ಮೇಲೆ ರ್‍ಯಾಂಕ್‌ ನೀಡಲಾಗಿದೆ ಎಂದ‌ರು.
ಈ ವಿದ್ಯಾರ್ಥಿಗಳಿಗೆ ಯಾವ ರೀತಿ ಸಹಾಯ ಮಾಡಬಹುದು ಎಂಬ ಬಗ್ಗೆ ಸುದೀರ್ಘ‌ವಾಗಿ ಚರ್ಚಿಸ ಲಾಯಿತು. ಏನು ಮಾಡಿದರೂ ಎರಡೂ ಪರೀಕ್ಷೆಗಳನ್ನು ಬರೆದಿರುವ ಇತರ ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳಿಗೆ ಅನ್ಯಾಯವಾಗು ತ್ತದೆ. ಅವರ ರ್‍ಯಾಂಕಿಂಗ್‌ನಲ್ಲಿ ಬಹಳ ವ್ಯತ್ಯಾಸ ಆಗುತ್ತದೆ. ಹೀಗಾಗಿ ಕೆಇಎ ತೆಗೆದುಕೊಂಡಿರುವ ನಿಲುವು ಸರಿಯಾಗಿದೆ ಎಂದರು.

Advertisement

ಈ ವಿಷಯವನ್ನು ಮುಖ್ಯಮಂತ್ರಿ ಗಮನಕ್ಕೂ ತರಲಾಗಿದೆ. ನನ್ನ ಪ್ರಕಾರ ಈ 24 ಸಾವಿರ ವಿದ್ಯಾರ್ಥಿಗಳಿಗೂ ವಿವಿಧ ಕಾಲೇಜುಗಳಲ್ಲಿ ಸೀಟು ಸಿಗಲಿದೆ. ಆತಂಕಕ್ಕೆ ಒಳಗಾಗುವುದು ಬೇಡ ಎಂದು ಸಚಿವರು ಮನವಿ ಮಾಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next