Advertisement

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಮಧ್ಯಂತರ ವರದಿ ತರಿಸಿಕೊಂಡ ಸರ್ಕಾರ

10:25 AM Dec 22, 2022 | Team Udayavani |

ಬೆಳಗಾವಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆಯವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮಧ್ಯಂತರ ವರದಿ ಸಲ್ಲಿಸಿದ್ದಾರೆ.

Advertisement

ಪಂಚಮಸಾಲಿ ಮೀಸಲು ಹೋರಾಟ ತಾರಕಕ್ಕೆ ಏರಿರುವ ಹಿನ್ನೆಲೆಯಲ್ಲಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಹೀಗಾಗಿ ತರಾತುರಿಯಲ್ಲಿ ಮಧ್ಯಂತರ ವರದಿ ತರಿಸಿಕೊಂಡಿದೆ. ಹನ್ನೆರಡು ಜಿಲ್ಲೆಗಳಲ್ಲಿ ಇ‌ನ್ನೂ ಅಧ್ಯಯ‌ನ ನಡೆಸುವುದು ಬಾಕಿ ಇದೆ ಎಂದು ಆಯೋಗ ಸ್ಪಷ್ಟಪಡಿಸಿದ್ದು, ಇದರ ಆಧಾರದ ಮೇಲೆ ಒಂದಿಷ್ಟು ಸಮಯ ವ್ಯಯಿಸುವ ತಂತ್ರವನ್ನು ರಾಜ್ಯ ಸರ್ಕಾರ ಅನುಸರಿಸುವ ಸಾಧ್ಯತೆಯಿದೆ.

ಇದನ್ನೂ ಓದಿ:ದಚ್ಚು- ಕಿಚ್ಚ ದೋಸ್ತ್? ಮುನಿಸು ಮರೆಯುತ್ತಾ ಸ್ಟಾರ್ ಜೋಡಿ?

ಪಂಚಮಸಾಲಿ ಮೀಸಲಿಗೆ ಆಗ್ರಹಿಸಿ ಸಮುದಾಯದ ಮುಖಂಡರು ಇಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಲಕ್ಷಾಂತರ ಜನರು ಭಾಗವಹಿಸುವ ಸಾಧ್ಯತೆ ಇದೆ. ಈ‌ ಮಧ್ಯೆ ಆಯೋಗ ಸಲ್ಲಿಸಿದ ಮಧ್ಯಂತರ ವರದಿಗೆ ಮಹತ್ವ ಲಭಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next