Advertisement

ಇಂದಿನಿಂದ ಇನ್ನಷ್ಟು ಬಸ್‌ ಸಂಚಾರ: ರಾಮನಗೌಡರ

07:22 PM Jul 05, 2021 | Team Udayavani |

ಹುಬ್ಬಳ್ಳಿ: ಅನ್‌ಲಾಕ್‌ 3.0ರಲ್ಲಿ ಸರಕಾರ ಲಾಕ್‌ಡೌನ್‌ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದ್ದು, ವಾಣಿಜ್ಯ ವ್ಯವಹಾರಗಳ ಅವಧಿಯನ್ನು ರಾತ್ರಿ 9ರ ವರೆಗೆ ಹೆಚ್ಚಿಸಲಾಗಿದೆ. ಆದ್ದರಿಂದ ಜು. 5ರಿಂದ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಬಸ್‌ಗಳನ್ನು ಹೆಚ್ಚಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ವಾಕರಸಾ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌. ರಾಮನಗೌಡರ ತಿಳಿಸಿದ್ದಾರೆ.

Advertisement

ಸರಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಪೂರ್ಣ ಪ್ರಮಾಣದ ಸಿಬ್ಬಂದಿಯೊಂದಿಗೆ ಕರ್ತವ್ಯ ನಿರ್ವಹಣೆಗೆ ಅವಕಾಶ ನೀಡಲಾಗಿದೆ. ಹೀಗಾಗಿ ಜನರ ಓಡಾಟ ಸಹಜವಾಗಿಯೇ ಹೆಚ್ಚಾಗಲಿದೆ. ಇದರೊಂದಿಗೆ ಬಸ್‌ಗಳಲ್ಲಿ ಎಲ್ಲಾ ಆಸನಗಳ ಭರ್ತಿಗೆ ಅವಕಾಶ ನೀಡಿರುವುದರಿಂದ ಸಾರಿಗೆ ಸಂಸ್ಥೆಯ ಆದಾಯ ವೃದ್ಧಿಗೆ ಬಹಳಷ್ಟು ಸಹಕಾರಿಯಾಗಲಿದೆ. ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಬಸ್‌ಗಳ ಸಂಖ್ಯೆಯಲ್ಲಿ ಕ್ರಮೇಣ ಹೆಚ್ಚಳ ಮಾಡಲಾಗುತ್ತಿದೆ. ಕಳೆದ ವಾರ ಹುಬ್ಬಳ್ಳಿ ವಿಭಾಗದಲ್ಲಿ ನಿತ್ಯ 250ರಿಂದ 255 ಬಸ್‌ಗಳು ಸಂಚರಿಸಿದ್ದವು. 40ರಿಂದ 45 ಸಾವಿರ ಜನರು ಪ್ರಯಾಣಿಸಿದ್ದಾರೆ. ಸಂಸ್ಥೆಗೆ ನಿತ್ಯ 22ರಿಂದ 24 ಲಕ್ಷ ರೂ. ಆದಾಯ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯೊಳಗಡೆ ತಾಲೂಕು ಕೇಂದ್ರಗಳು ಮತ್ತು ಪ್ರಮುಖ ಸ್ಥಳಗಳಿಗೆ ಬಸ್‌ಗಳು ಸಂಚರಿಸುತ್ತಿವೆ. ಇನ್ನುಳಿದ ಹಳ್ಳಿಗಳಿಗೆ ಮತ್ತು ಹೊರಜಿಲ್ಲೆಗಳಿಗೆ ಬಸ್‌ ಸೇವೆ ವಿಸ್ತರಿಸಲಾಗುತ್ತದೆ. ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುವ ನೆರೆಯ ಜಿಲ್ಲೆಗಳಾದ ಬೆಳಗಾವಿ, ಗದಗ, ಹಾವೇರಿ ಹಾಗೂ ತಾಲೂಕುಗಳಾದ ಶಿರಹಟ್ಟಿ, ಕಲಘಟಗಿ, ಕುಂದಗೋಳ, ತಡಸ, ಲಕ್ಷ್ಮೇಶ್ವರ, ಹಾನಗಲ್‌ ಮುಂತಾದ ಸ್ಥಳಗಳಿಗೆ ನಿರಂತರವಾಗಿ ಬಸ್‌ ಬಿಡಲಾಗುತ್ತದೆ. ವಿಜಯಪುರ, ಬಾಗಲಕೋಟೆ, ದಾವಣಗೆರೆ ಮತ್ತಿತರ ಸ್ಥಳಗಳಿಗೆ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಬಸ್ಸುಗಳನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next