Advertisement
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ನ.11ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್, ಕೆಂಪೇಗೌಡರ 108 ಅಡಿಗಳ ಪುತ್ಥಳಿ ಲೋಕಾರ್ಪಣೆ ಮಾಡಲಿರುವ ಹಿನ್ನೆಲೆಯಲ್ಲಿ ಕೆಂಪೇಗೌಡರ ವಿಚಾರಧಾರೆಗಳನ್ನು ಪಸರಿಸಲು ಈ ರಥಯಾತ್ರೆಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದ್ದು, ಜಿಲ್ಲೆಯ ಪವಿತ್ರ ಕ್ಷೇತ್ರಗಳ ಮೃತ್ತಿಕೆ ಸಂಗ್ರಹಿಸಲಾಗುವುದು ಎಂದು ವಿವರಿಸಿದರು.
Related Articles
Advertisement
ಸಂಚಾಲಕರ ನೇಮಕ: ರಥಯಾತ್ರೆ ಯಶಸ್ವಿಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಸಂಚಾಲಕರನ್ನು ನೇಮಿಸಿದ್ದು, ಕೋಲಾರ ತಾಲೂಕಿನಲ್ಲಿ ಸರ್ಕಾರಿ ಅಭಿಯೋಜಕ ಮಾಗೇರಿ ನಾರಾಯಣಸ್ವಾಮಿ, ಬೆಗ್ಲಿ ಪ್ರಕಾಶ್, ಶ್ರೀನಿವಾಸಪುರ ತಾಲೂಕಿಗೆ ಚಂದ್ರಶೇಖರ್ ನಾಗದೇನಹಳ್ಳಿ, ಮಾಲೂರಿಗೆ ಪ್ರಭಾಕರ್, ವೆಂಕಟೇಶಗೌಡ, ಹರೀಶ್‌ಗೌಡರನ್ನು, ಬಂಗಾರಪೇಟೆ ತಾಲೂಕಿಗೆ ಹನುಮಯ್ಯ, ಕೆ.ಚಂದ್ರಾರೆಡ್ಡಿ, ಶ್ರೀನಿವಾಸಗೌಡರನ್ನು, ಮುಳಬಾಗಿಲು ತಾಲೂಕಿಗೆ ವೆಂಕಟರಮಣ, ನಾಗಾರ್ಜುನ್ ಹಾಗೂ ಕೆಜಿಎಫ್ ತಾಲೂಕಿಗೆ ವೆಂಕಟಪತಿ ಅವರನ್ನು ನೇಮಿಸಲಾಗಿದೆ ಎಂದು ವಿವರಿಸಿದರು.
ಎಲ್ಲರೂ ಭಾಗವಹಿಸಿ: ಇದು ಸರ್ಕಾರದ ಕಾರ್ಯಕ್ರಮವಾಗಿದ್ದು, ಜಿಲ್ಲಾಡಳಿತ ಸಹಕಾರದಿಂದ ಎಲ್ಲಾ ಗ್ರಾಪಂಗೆ ಭೇಟಿ ನೀಡಲಾಗುವುದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ಸಂಸದ ಎಸ್.ಮುನಿಸ್ವಾಮಿ, ಶಾಸಕರು, ಮಾಜಿ ಶಾಸಕರು, ವಿವಿಧ ಪಕ್ಷಗಳ ಮುಖಂಡರು ಭಾಗವಹಿಸುವ ಮೂಲಕ ಸಾಮರಸ್ಯಕ್ಕೆ ನಾಂದಿಯಾಡಬೇಕೆಂದು ಮನವಿ ಮಾಡಿದರು.
ಮಾಜಿ ಶಾಸಕ ಹಾಗೂ ರಥಯಾತ್ರೆ ಜಿಲ್ಲಾ ಸಹಸಂಚಾಲಕ ಬಿ.ಪಿ.ವೆಂಕಟಮುನಿಯಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್, ಮಾಜಿ ಅಧ್ಯಕ್ಷ ಕೃಷ್ಣಾರೆಡ್ಡಿ, ಜಿಲ್ಲಾ ವಕ್ತಾರ ಎಸ್.ಬಿ. ಮುನಿವೆಂಕಟಪ್ಪ, ಕೆಯುಡಿಎ ಅಧ್ಯಕ್ಷ ವಿಜಯಕುಮಾರ್, ಮಾಜಿ ಅಧ್ಯಕ್ಷ ಓಂ ಶಕ್ತಿ ಚಲಪತಿ, ಜಿಲ್ಲಾ ಕಾರ್ಯದರ್ಶಿ ಮಾಗೇರಿ ನಾರಾಯಣಸ್ವಾಮಿ, ರಾಜ್ಯ ಕಾರ್ಯದರ್ಶಿ ಕೃಷ್ಣಮೂರ್ತಿ, ನಗರ ಘಟಕ ಅಧ್ಯಕ್ಷ ತಿಮ್ಮರಾಯಪ್ಪ, ಮುಖಂಡರಾದ ರಾಜೇಶ್‌ಸಿಂಗ್, ಸತ್ಯನಾರಾಯಣರಾವ್, ಮಂಜುನಾಥ್, ಮಾಧ್ಯಮ ಪ್ರಮುಖ್ ಕೆಂಬೋಡಿ ನಾರಾಯಣಸ್ವಾಮಿ ಮತ್ತಿತರರು ಹಾಜರಿದ್ದರು.