Advertisement

ಜಮ್ಮು ಕಾಶ್ಮೀರ ಮೇಘ ಸ್ಪೋಟ : ಸರ್ಕಾರ ಪರಿಸ್ಥಿತಿಯನ್ನು ಗಮನಿಸುತ್ತಿದೆ : ಪ್ರಧಾನಿ

01:13 PM Jul 28, 2021 | Team Udayavani |

ನವ ದೆಹಲಿ : ಭಾರಿ ಮೇಘಸ್ಫೋಟ ಸಂಭವಿಸಿದ ನಂತರ ಕಾರ್ಗಿಲ್‌ ನ ಕಿಶ್ಟ್‌ ವಾರ್‌ ನಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement

ಸಾಧ್ಯತೆಗಳುಳ್ಳ ಎಲ್ಲಾ ನೆರವುಗಳನ್ನು ಪೀಡಿತ ಪ್ರದೇಶಗಳಿಗೆ ನೀಡಲಾಗುತ್ತಿದೆ. ಎಲ್ಲರ ಹಿತ ಕಾಯುವುದಕ್ಕೆ ಸರ್ಕಾರ ಸಂಪೂರ್ಣ ಪ್ರಯತ್ನ ಮಾಡುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಜಮೀನಿನ ಮ್ಯುಟೇಶನ್ ಮಾಡಲು 15 ಲಕ್ಷ ರೂ. ಲಂಚ : ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್

ಇನ್ನು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಮೇಘ ಸ್ಪೋಟದಿಂದ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.

ಜಮ್ಮು ಕಾಶ್ಮೀರದ  ಕಿಶ್ಟ್‌ ವಾರ್‌ ಪ್ರದೇಶಗಳಲ್ಲಿ ನಡೆದ ಮೇಘ ಸ್ಫೋಟದ ಕಾರಣದಿಂದಾಗಿ ಹಲವಾರು ಮನೆಗಳು ಧರಾಶಾಯಿಯಾಗಿದ್ದು, ಆ ಪರಿಣಾಮವಾಗಿ ಕೆಲವರು ಮೃತಪಟ್ಟಿರುವುದಾಗಿ ವರದಿಯಾಗಿವೆ. ಈಗಾಗಲೇ ಐವರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

ಸುಮಾರು  25 ಮಂದಿ ನಾಪತ್ತೆಯಾಗಿದ್ದು, ಪತ್ತೆ ಕಾರ್ಯಾಚರಣೆ ಮುಂದುವರಿದಿದೆ. ಇಂದು(ಬುಧವಾರ, ಜುಲೈ 28) ಮುಂಜಾನೆ 4.30 ರ ಸುಮಾರಿಗೆ ಡಚ್ಚನ್ ತಹಸಿಲ್‌ ನ ಹೊಂಜಾರ್ ಗ್ರಾಮದಲ್ಲಿ ಮೇಘ ಸ್ಪೋಟ ಸಂಭವಿಸಿದ್ದು, ಪೊಲೀಸರು, ಸೇನೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ ಡಿ ಆರ್‌ ಎಫ್) ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಗುಡ್ ಲಕ್: ಟೋಕಿಯೋದಲ್ಲಿ ಇತಿಹಾಸ ಸೃಷ್ಟಿಸಲು ಪಣ ತೊಟ್ಟ ಬಸ್‌ ಚಾಲಕನ ಮಗಳು ಪ್ರಣತಿ ನಾಯಕ್

Advertisement

Udayavani is now on Telegram. Click here to join our channel and stay updated with the latest news.

Next