Advertisement

ರೈಸ್‌ ಟೆಕ್ನಾಲಜಿ ಪಾರ್ಕ್‌ ಅಭಿವೃದ್ಧಿಗೆ ಸರ್ಕಾರ ಬದ್ಧ

02:40 PM May 20, 2020 | Suhan S |

ಕನಕಗಿರಿ: ರೈಸ್‌ ಟೆಕ್ನಾಲಜಿ ಪಾರ್ಕ್‌ ಅಭಿವೃದ್ಧಿಗೆ 120 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಬದ್ಧವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

Advertisement

ಸಮೀಪದ ನವಲಿ ಹತ್ತಿರ ಇರುವ ರೈಸ್‌ ಟೆಕ್ನಾಲಜಿ ಪಾರ್ಕ್‌ಗೆ ಮಂಗಳವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು. ರೈಸ್‌ ಟೆಕ್ನಾಲಜಿ ಪಾರ್ಕ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಶೇ.40 ಮತ್ತು ರಾಜ್ಯ ಸರ್ಕಾರ ಶೇ.60 ಅನುದಾನ ನೀಡಿದೆ. ರೈಸ್‌ ಟೆಕ್ನಾಲಜಿ ಪಾರ್ಕ್‌ ನಿರ್ಮಾಣದಿಂದ ಈ ಭಾಗದ ಜನರಿಗೆ ಉದ್ಯೋಗ ಸೇರಿದಂತೆ ಹಲವಾರು ಅನುಕೂಲವಾಗಲಿದೆ. ಪಾರ್ಕ್‌ನ ಉದ್ದೇಶ ಭತ್ತದ ಎಲ್ಲ ಸಮಸ್ಯೆಗಳಿಗೆ ಏಕಗವಾಕ್ಷಿ ಪರಿಹಾರ ನೀಡುವುದು. ಉಪ ಉತ್ಪನ್ನಗಳ ತಯಾರಿಕೆ ಘಟಕಗಳ ಸ್ಥಾಪನೆ ಮಾಡುವುದು.ರಾಷ್ಟ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆ ಜೋಡಣೆಯಾಗುತ್ತದೆ. ಕೊಪ್ಪಳ, ರಾಯಚೂರು, ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯಲಾಗುತ್ತಿದೆ. ರೈಸ್‌ ಟೆಕ್ನಾಲಜಿ ಪಾರ್ಕ್‌ ಸ್ಥಾಪನೆಯಿಂದ ಈ ಭಾಗದ ರೈತರಿಗೆ ಅನುಕೂಲವಾಗಲಿದೆ ಎಂದರು.

ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ವರದಿ ತಯಾರಿಸಲು ಈಗಾಗಲೇ 14 ಕೋಟಿ ರೂ. ಅನುದಾನ ಕೂಡಾ ಬಿಡುಗಡೆ ಮಾಡಲಾಗಿದೆ. ಲಾಕ್‌ಡೌನ್‌ ಆದ ಮೇಲೆ ಎಲ್ಲ ಚಟುವಟಿಕೆಗಳು ನಿಂತರೂ ಕೂಡ ಕೃಷಿ ಚಟುವಟಿಕೆಗಳು ಮಾತ್ರ ಎಲ್ಲೂ ನಿಂತಿಲ್ಲ. ಎಷ್ಟೇ ಕಷ್ಟವಾಗಲಿ ಏನೇ ತೊಂದರೆಯಾಗಲಿ ನಾವು ಕೃಷಿ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಡಿಪ್ಲೋಮಾ ಇನ್‌ ಅಗ್ರಿಕಲ್ಚರಲ್‌ ಮಾಡಿದ 2,326 ವಿದ್ಯಾರ್ಥಿಗಳನ್ನು ರೈತಮಿತ್ರ ಎಂದು ನೇಮಕಾತಿ ಮಾಡಿಕೊಳ್ಳುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಆದಷ್ಟು ಬೇಗ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು. ಆತ್ಮ ಯೋಜನೆ ಯಾವುದೇ ರೀತಿಯಲ್ಲಿ ನಿಲ್ಲುವುದಿಲ್ಲ ಅದು ಮುಂದುವರಿಯುತ್ತದೆ ಎಂದರು

ಇದೇ ವೇಳೆ ಭತ್ತಕ್ಕೆ ಉತ್ತಮ ಬೆಂಬಲ ನೀಡುವಂತೆ ಸ್ಥಳೀಯ ರೈತರು ಸಚಿವರಿಗೆ ಮನವಿ ಸಲ್ಲಿಸಿದರು. ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮನವಳ್ಳಿ, ಬಸವರಾಜ ದಡೇಸುಗೂರು, ಎಪಿಎಂಸಿ ಅಧ್ಯಕ್ಷ ಶರಣಪ್ಪ ಭಾವಿ, ಪ್ರಮುಖರಾದ ನಾಗರಾಜ ಬಿಲ್ಗಾರ್‌, ರಮೇಶ ನಾಯಕ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next