Advertisement

Almatti ಡ್ಯಾಂ ವಿಸ್ತರಣೆಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

09:02 PM Dec 16, 2024 | Team Udayavani |

ಸುವರ್ಣ ವಿಧಾನಸೌಧ: ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟವನ್ನು 524.26 ಮೀಟರ್‌ವರೆಗೆ ಎತ್ತರಿಸಲು ಸರ್ಕಾರ ಬದ್ಧವಾಗಿದ್ದು, ಮುಳುಗಡೆ ಆಗುವ ಜಮೀನನ್ನು ಒಂದೇ ಹಂತದಲ್ಲಿ ಸ್ವಾಧೀನಪಡಿಸಿಕೊಳ್ಳಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಇತ್ತ ವಿಧಾನಮಂಡಲದ ಉಭಯ ಸದನಗಳಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚೆ ಆರಂಭವಾಗಿದ್ದರೆ, ಅತ್ತ ಸಿಎಂ ಸಿದ್ದರಾಮಯ್ಯ ಅವರು ಸುವರ್ಣಸೌಧದಲ್ಲಿ ಸೋಮವಾರದಂದು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ಸಂಬಂಧಿಸಿದ ಸಭೆ ನಡೆಸಿದರು.

ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ, ಪುನರ್‌ನಿ ರ್ಮಾಣ ಕಲ್ಪಿಸಲು ಅಗತ್ಯ ಕ್ರಮಗಳೆಲ್ಲವನ್ನೂ ತೆಗೆದುಕೊಳ್ಳಲಾಗುವುದು ಭರವಸೆ ನೀಡಿದ್ದಾರೆ.

ಪ್ರಸ್ತುತ 519.60 ಮೀಟರ್‌ವರೆಗೆ ನೀರಿನ ಸಂಗ್ರಹಣೆ ಮಾಡುತ್ತಿರುವ ಆಲಮಟ್ಟಿ ಜಲಾಶಯದಲ್ಲಿ 524.26 ಮೀಟರ್‌ವರೆಗೆ ನೀರು ನಿಲ್ಲಿಸಲು ನಮಗೆ ಅವಕಾಶವಿದೆ. ಕೃಷ್ಣಾ ನ್ಯಾಯಾಧಿಕರಣದ ಆದೇಶವನ್ನು ಕೇಂದ್ರ ಸರ್ಕಾರ ಅಧಿಸೂಚನೆ ಮೂಲಕ ಅಧಿಕೃತಗೊಳಿಸಿಬಿಟ್ಟರೆ ನೀರಿನ ಸಂಗ್ರಹಣೆ ಹೆಚ್ಚಿಸಲು ಅವಕಾಶ ಸಿಗಲಿದೆ.

ಹಂತ-ಹಂತವಾಗಿ ಯೋಜನೆ ಪೂರ್ಣ :
ಇದಕ್ಕಾಗಿ ಮುಳುಗಡೆ ಆಗಲಿರುವ ಜಮೀನು, ಪುನರ್ವಸತಿ, ಕಾಲುವೆ ನಿರ್ಮಾಣಗಳಿಗೆ ಅಂದಾಜು 1,33,867 ಕೊಟಿ ರೂ. ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಿದೆ. ಈವರೆಗೆ 28,967 ಎಕರೆ ಸ್ವಾಧೀನಪಡಿಸಿಕೊಂಡಿದ್ದು, ಇನ್ನೂ 1,04,963 ಎಕರೆ ವಶಪಡಿಸಿಕೊಳ್ಳುವುದು ಬಾಕಿ ಇದೆ. ಇದಲ್ಲದೆ, ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗುವ 188 ಗ್ರಾಮಗಳಿರುವ 73,020 ಎಕರೆಯನ್ನೂ ಸ್ವಾಧೀನಪಡಿಸಿಕೊಳ್ಳುವ ಕೆಲಸ ಆಗಬೇಕಿದೆ. ಹಂತ ಹಂತವಾಗಿ ಯೋಜನೆಯನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

Advertisement

ನ್ಯಾಯಯುತ ಪರಿಹಾರ:
2022ರಲ್ಲಿ ಅಂದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹಂತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊಂಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಪ್ರಾಶಸ್ತ್ಯದಲ್ಲಿ ಒಂದೇ ಹಂತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು. ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗದರ್ಶಿ ಮೌಲ್ಯ, ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಭೂಸ್ವಾಧೀನಕ್ಕೆ ಸಂಬಂಧಪಟ್ಟಂತೆ 20 ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿಂಪಡೆದುಕೊಂಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು.
-ಸಿದ್ದರಾಮಯ್ಯ, ಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next