Advertisement

Congress: ಯುವ ನಿಧಿ ಅನುಷ್ಠಾನಕ್ಕೆ ಸರಕಾರ ಬದ್ಧ: ರಣದೀಪ್‌ ಸುರ್ಜೇವಾಲಾ

11:37 PM Dec 16, 2023 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತೆ ಪದವಿ ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿಗಳಿಗೆ ಯುವನಿಧಿ ಯೋಜನೆಯನ್ನು ನಮ್ಮ ಸರಕಾರ ಜಾರಿಗೊಳಿಸಲಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಕಟನೆ ನೀಡಿರುವ ಅವರು, ಕಾಂಗ್ರೆಸ್‌ ನೀಡಿದ್ದ ಗ್ಯಾರಂಟಿ ವಾಗ್ಧಾನಕ್ಕೆ ವಿಶ್ವಾಸವಿಟ್ಟು ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಜನರು ನೀಡಿ ಸಂಪೂರ್ಣ ಬಹುಮತ ದೊಂದಿಗೆ ಅಧಿಕಾರಕ್ಕೆ ತಂದಿರುವುದು ನಮ್ಮ ಸರಕಾರದ ಜವಾಬ್ದಾರಿಯನ್ನು ಇಮ್ಮಡಿಗೊಳಿಸಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಮೊದಲ ಸಂಪುಟದಲ್ಲೇ ಐದರಲ್ಲಿ ನಾಲ್ಕು ಗ್ಯಾರಂಟಿಗಳನ್ನು ಜಾರಿಗೊಳಿ ಸುವ ನಿರ್ಧಾರ ಕೈಗೊಂಡು ಅಧಿಸೂಚನೆ ಹೊರಡಿಸಲಾಯಿತು ಎಂದು ವಿವರಿಸಿದ್ದಾರೆ.

4.30 ಕೋಟಿ ಜನರನ್ನು ತಲುಪುತ್ತಿರುವ 4 ಗ್ಯಾರಂಟಿಗಳು: ಪ್ರಸ್ತುತ ವರ್ಷದಲ್ಲಿ ನಮ್ಮ ಎಲ್ಲ 5 ಗ್ಯಾರಂಟಿ ಯೋಜನೆಗಳಿಗೆ ಬೇಕಾದ 38 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯ ಸರಕಾರ ಕಾದಿರಿಸಿದೆ. ಮುಖ್ಯವಾಗಿ ಈ ನಾಲ್ಕೂ ಪ್ರಮುಖ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ 4.30 ಕೋಟಿ ಫ‌ಲಾನುಭವಿಗಳು ಪ್ರಯೋಜನ ಪಡೆದುಕೊಂಡಿದ್ದಾರೆ. ಪ್ರಸ್ತುತ ನಮ್ಮ ಐದನೇ ಗ್ಯಾರಂಟಿಯಾದ ಯುವ ನಿಧಿ ಯೋಜನೆಗೆ ಇದೇ ಡಿಸೆಂಬರ್‌ ತಿಂಗಳ ಕೊನೆಯಲ್ಲಿ ನೋಂದಣಿ ಪ್ರಕ್ರಿಯೆಯು ಪ್ರಾರಂಭ ಆಗಲಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next