ಹೊಸದಿಲ್ಲಿ: ಸ್ಮಾರ್ಟ್ ಸಿಟಿ ಯೋಜನೆ ಪೂರ್ಣಗೊಳಿಸಲು ನಿಗದಿಪಡಿಸಿದ್ದ ಡೆಡ್‌ಲೈನ್ ಅನ್ನು 2024ರ ಜೂನ್‌ವರೆಗೆ ವಿಸ್ತರಿಸಲು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ನಿರ್ಧರಿಸಿದೆ.
Advertisement
ಈ ಹಿಂದೆ ಯೋಜನೆ ಪೂರ್ಣಗೊಳಿಸಲು ಡೆಡ್‌ಲೈನ್ 2023ರ ಜೂನ್ ಇತ್ತು. ಆದರೆ ಈಗ ಚಾಲ್ತಿಯಲ್ಲಿರುವ ಕಾಮಗಾರಿಗಳು ಪೂರ್ಣಗೊಳ್ಳಲು ಇನ್ನು ಸಮಯಾವಕಾಶ ಬೇಕೆಂದು ಕೆಲವು ನಗರಗಳ ಸ್ಮಾರ್ಟ್ ಸಿಟಿ ಯೋಜನೆಗಳ ಉಸ್ತುವಾರಿ ಹೊಂದಿದ್ದ ಸಂಸ್ಥೆಗಳು ಮನವಿ ಮಾಡಿದ್ದವು.
2015ರ ಜೂ.25ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸ್ಮಾರ್ಟ್ ಸಿಟಿ ಯೋಜನೆಯಡಿ ದೇಶದ 100 ನಗರಗಳನ್ನು ಆಯ್ಕೆ ಮಾಡಿತ್ತು.