Advertisement

Govt Holiday: ಎಸ್.ಎಂ.ಕೃಷ್ಣ ನಿಧನ: ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

03:48 PM Dec 10, 2024 | Team Udayavani |

ಉಳ್ಳಾಲ: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರು ಮಂಗಳವಾರ (ಡಿ.10) ನಸುಕಿನ ಅಸುನೀಗಿದರು. ಕೆಲ ತಿಂಗಳಿನಿಂದ ಅಸೌಖ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಎಸ್‌.ಎಂ.ಕೃಷ್ಣ ಅವರು ನಿಧನರಾದರು.

Advertisement

ಎಸ್.ಎಂ.ಕೃಷ್ಣ ನಿಧನದ ಕಾರಣದಿಂದ ಬುಧವಾರ (ಡಿ.11) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಎಲ್ಲಾ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ಬುಧವಾರ ರಜೆ ಇರಲಿದೆ.

ಸರ್ಕಾರಿ ರಜೆಯ ಕಾರಣದಿಂದ ಬುಧವಾರ ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಪರೀಕ್ಷೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ವರದಿಯಾಗಿದೆ.

ಎಸ್.ಎಂ.ಕೆ ಅವರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಗೌರವಗಳೊಂದಿಗೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಮಂಗಳವಾರ ಇಡೀ ದಿನ ಇಡಲಾಗುವುದು. ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ನೆರವೇರಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next