Advertisement

ಎಸ್ ಎಸ್ಎಲ್ ಸಿ ಪರೀಕ್ಷೆ ನಡೆಸಲು ಸರ್ಕಾರ ಸರ್ವಸನ್ನದ್ಧವಾಗಿದೆ: ಸುರೇಶ್ ಕುಮಾರ್

04:36 PM May 28, 2020 | keerthan |

ಬೆಂಗಳೂರು: ಈ ಬಾರಿ ಕೋವಿಡ್-19 ಭೀತಿಯ ನಡುವೆಯೂ ಎಸ್ ಎಸ್ಎಲ್ ಸಿ ಪರೀಕ್ಷೆಯನ್ನು ಸುರಕ್ಷಿತವಾಗಿ ನಡೆಸಲು ಸರಕಾರ ಸರ್ವ ಸನ್ನದ್ದವಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Advertisement

ಈ ಬಗ್ಗೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಪತ್ರ ಬರೆದಿರುವ ಅವರು, ಪರೀಕ್ಷಾ ಕೇಂದ್ರದಲ್ಲಿ ಮಕ್ಕಳು ಒಂದು ಮೀಟರ್ ಅಂತರದಲ್ಲಿ ಕುಳಿತುಕೊಳ್ಲುವುದು ಸೇರಿದಂತೆ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅನಾರೋಗ್ಯ ಪೀಡಿತ ವಿದ್ಯಾರ್ಥಿಗಳಿಗೆ ಸುರಕ್ಷತೆಯ ದೃಷ್ಠಿಯಿಂದ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು, ಇದಕ್ಕಾಗಿ ಹೆಚ್ಚುವರಿ ಕೊಠಡಿಗಳನ್ನು ಕಾಯ್ದಿರಿಸಬೇಕು ಎಂದಿದ್ಧಾರೆ.

ಅಗತ್ಯ ಬಿದ್ದಲ್ಲಿ ವಲಸೆ ಕಾರ್ಮಿಕರ ಮಕ್ಕಳಿಗೆ ಪರೀಕ್ಷೆ ಬರೆಯಲು ವಿಶೇಷ ಅವಕಾಶ ಕಲ್ಪಿಸುವುದರ ಬಗ್ಗೆ ಗಮನಹರಿಸಲಾಗುವುದು ಎಂದ ಅವರು, ಪರೀಕ್ಷೆಗಿಂತ ಮೊದಲು ಪ್ರತಿ ವಿದ್ಯಾರ್ಥಿ ಮತ್ತು ಪೋಷಕರನ್ನು ಭೇಟಿ ಮಾಡಿ ಪರೀಕ್ಷೆ ಮತ್ತು ಸುರಕ್ಷಿತ ಪರೀಕ್ಷಾ ವಾತವರಣದ ಬಗ್ಗೆ ಆತ್ಮವಿಶ್ವಾಸ ಮೂಡಿಸಬೇಕು ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next